– ಸೃಷ್ಟಿಯಾಗಿರುವ ಗೊಂದಲ ಕೊನೆಯಾಗಬೇಕು: ಹೊಸಬಾಳೆ
– ಘಟನೆಯನ್ನು ದುರುಪಯೋಗ ಪಡಿಸುವವರ ಸಂಚನ್ನು ವಿಫಲಗೊಳಿಸಿ
ನವದೆಹಲಿ: ಅಯೋಧ್ಯೆಯ ರಾಮ ಮಂದಿರದ (Ram Mandir) ದೇಣಿಗೆಯಿಂದ ಕೋಟ್ಯಂತರ ರೂಪಾಯಿ ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಆರ್‌ಎಸ್‌ಎಸ್ (RSS) ಮೌನ ಮುರಿದಿದೆ. ಈ ದುರದೃಷ್ಟಕರ ಘಟನೆಯ ಸುತ್ತ ಸೃಷ್ಟಿಯಾಗಿರುವ ಗೊಂದಲ ಮತ್ತು ಅನಿಶ್ಚಿತತೆಗಳು ತಕ್ಷಣವೇ ಕೊನೆಗೊಳ್ಳಬೇಕು ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ(Dattatreya Hosabale) ಅವರು ಒತ್ತಾಯಿಸಿದ್ದಾರೆ.
ದೇಣಿಗೆಗಳಿಂದ ಹಣ ಕಳುವಾಗಿರುವ ಘಟನೆಯು ಕೋಟ್ಯಂತರ ರಾಮಭಕ್ತರ ಶ್ರದ್ಧೆ ಹಾಗೂ ನಂಬಿಕೆಗೆ ನೋವಾಗಿದೆ. ಈ ಘಟನೆಯಿಂದ ನಾವೆಲ್ಲರೂ ತೀವ್ರವಾಗಿ ನೊಂದಿದ್ದೇವೆ ಎಂದು ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ.
ಮಂದಿರದ ಆಡಳಿತ ಮಂಡಳಿ ಹಾಗೂ ಎಸ್‌ಐಟಿ ತನಿಖಾ ತಂಡವು ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಅಗತ್ಯವಿರುವ ಎಲ್ಲಾ ಕಠಿಣ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು. ಸಾರ್ವಜನಿಕರಲ್ಲಿ ಸದ್ಯ ಮೂಡಿರುವ ಗೊಂದಲ ಮತ್ತು ಅನಿಶ್ಚಿತತೆಗೆ ಆಡಳಿತ ಮಂಡಳಿ ಶೀಘ್ರವಾಗಿ ತೆರೆ ಎಳೆಯಬೇಕು ಎಂದು ಹೇಳಿದರು.
Statement issued by Dattatreya Hosabale, Sarkaryavah (General Secretary) of the Rashtriya Swayamsevak Sangh (RSS).
New Delhi, July 3, 2026The grand temple constructed at the Shri Ram Janmabhoomi has become a center of reverence, faith, and devotion for the entire Hindu society,… pic.twitter.com/ppdkc8kuwU
— RSS (@RSSorg) July 3, 2026
ಈ ಕಠಿಣ ಸಮಯದಲ್ಲಿ ಇಡೀ ಹಿಂದೂ ಸಮಾಜವು ಅಗತ್ಯ ಸಂಯಮ ಮತ್ತು ತಾಳ್ಮೆಯನ್ನು ಪ್ರದರ್ಶಿಸಬೇಕು. ಈ ದುರದೃಷ್ಟಕರ ಘಟನೆಯನ್ನು ದುರುಪಯೋಗಪಡಿಸಿಕೊಂಡು ಹಿಂದೂ ಧರ್ಮ ಮತ್ತು ಸಮಾಜವನ್ನು ಜಗತ್ತಿನ ಮುಂದೆ ತೇಜೋವಧೆ ಮಾಡಲು ಹೊಂಚು ಹಾಕುತ್ತಿರುವ ಹಿಂದೂ ವಿರೋಧಿ ಹಾಗೂ ದೇಶ ವಿರೋಧಿ ಶಕ್ತಿಗಳ ಸಂಚನ್ನು ಭಕ್ತರು ವಿಫಲಗೊಳಿಸಬೇಕು ಎಂದು ಹೊಸಬಾಳೆ ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ದೇಣಿಗೆ ಲೂಟಿಕೋರರ ಮೇಲೆ ಬುಲ್ಡೋಜರ್ ಅಸ್ತ್ರ ಪ್ರಯೋಗಕ್ಕೆ ಯೋಗಿ ಸರ್ಕಾರದ ಸಿದ್ಧತೆ
ಅಯೋಧ್ಯೆಯ ರಾಮಮಂದಿರದಲ್ಲಿ ಭಕ್ತರು ನೀಡಿದ ದೇಣಿಗೆ ಹಣವನ್ನು ಎಣಿಕೆ ಮಾಡುವ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ವ್ಯವಸ್ಥಿತವಾಗಿ ಕಳವು ಮಾಡಲಾಗಿದೆ ಎಂಬ ಗಂಭೀರ ದೂರು ಕೇಳಿಬಂದಿತ್ತು. ಈ ಪ್ರಕರಣದ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರವು ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ.
ಇತ್ತೀಚಿನ ವರದಿಗಳ ಪ್ರಕಾರ, ಈ ಹಗರಣದಲ್ಲಿ ಸುಮಾರು 200 ಕೋಟಿವರೆಗೂ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಜನರನ್ನು ಬಂಧಿಸಿ ಜೈಲಿಗೆ ಅಟ್ಟಲಾಗಿದೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಡಿಜಿಟಲ್ ಪುರಾವೆಗಳ ಆಧಾರದ ಮೇಲೆ ಎಸ್‌ಐಟಿ ತನಿಖೆ ತೀವ್ರಗೊಂಡಿದೆ.
