ಹಾವೇರಿ: ಆರ್‌ಎಸ್‌ಎಸ್(RSS) ಗಣವೇಷಧಾರಿಗಳು ಇಂದು ಹಾವೇರಿ ಜಿಲ್ಲೆ ರಟ್ಟೀಹಳ್ಳಿ(Rattihalli) ಪಟ್ಟಣದಲ್ಲಿ ಆಕರ್ಷಕ ಪಥಸಂಚಲನ ನಡೆಸಿದರು. ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಿಂದ ಆರಂಭವಾದ ಪಥಸಂಚಲನವು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು.
Advertisement
ಎರಡು ದಿನಗಳ ಹಿಂದೆ ಆರ್‌ಎಸ್‌ಎಸ್‌ನ ಐವರು ಕಾರ್ಯಕರ್ತರ ಮೇಲೆ ಅನ್ಯಕೋಮಿನ ಜನರ ಗುಂಪು ಹಲ್ಲೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪಥಸಂಚಲನದ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: RSS ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ: 10 ಮಂದಿ ಅರೆಸ್ಟ್
Advertisement
Advertisement
ಹಾವೇರಿ, ಧಾರವಾಡ, ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಗಣವೇಷಧಾರಿಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಪಥಸಂಚಲನ ನಡೆಸುತ್ತಿದ್ದ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಹಿಂದೂ ಬಾಂಧವರು ಪುಷ್ಪ ಮಳೆ ಸುರಿಸಿದರು. ಇದನ್ನೂ ಓದಿ: ಫಸ್ಟ್ ಟೈಂ ಬೆಂಗಳೂರಿನಲ್ಲಿ ಲ್ಯಾಂಡ್ ಆಯ್ತು ವಿಶ್ವದ ದೊಡ್ಡ ವಿಮಾನ
Advertisement
ಹಲ್ಲೆ ನಡೆದ ಕಾರಣ ವಿವಿಧ ಜಿಲ್ಲೆಗಳ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪಟ್ಟಣಕ್ಕೆ ಆಗಮಿಸಿದ್ದರು. ಕಾರ್ಯಕರ್ತರ ಮೇಲೆ ಮಾಡಿದ ಅನ್ಯಕೋಮಿನ ಎಲ್ಲಾ ಆರೋಪಿಗಳನ್ನು ಬಂಧನ ಮಾಡುವಂತೆ ಆಗ್ರಹಿಸಿದರು.