ನವದೆಹಲಿ: ಲೋಕಸಮರದಲ್ಲಿ ಸ್ಪಷ್ಟ ಬಹುಮತ ಪಡೆದು ಭರ್ಜರಿ ಗೆಲುವನ್ನು ಬಿಜೆಪಿ ಸಾಧಿಸಿರುವ ಮೂಲಕ ದೇಶದಲ್ಲಿ ಮತ್ತೊಮ್ಮೆ ಸುಭದ್ರ ಸರ್ಕಾರ ಬಂದಿದೆ. ಬಿಜೆಪಿ ಗೆಲುವು ರಾಷ್ಟ್ರ ರಕ್ಷಣಾ ಪಡೆಯ ವಿಜಯ ಎಂದು ಆರ್‌ಎಸ್‌ಎಸ್ ವಿಭಿನ್ನವಾಗಿ ಬಣ್ಣಿಸಿದೆ.
ಕಮಲದ ಈ ಭರ್ಜರಿ ಗೆಲುವಿಗೆ ಕಾರಣರಾದ ಪ್ರತಿಯೊಬ್ಬರಿಗೂ ಆರ್‌ಎಸ್‌ಎಸ್ ಶುಭಾಶಯ ತಿಳಿಸಿದೆ. ಈ ಫಲಿತಾಂಶ ಪ್ರಜಾಪ್ರಭುತ್ವದ ಆತ್ಮ ಮತ್ತು ಅದರ ತತ್ವಗಳನ್ನು ಜಗತ್ತಿಗೆ ತೋರಿಸಿದೆ. ಈ ಮೂಲಕ ಮತ್ತೊಮ್ಮೆ ಪ್ರಜಾಪ್ರಭುತ್ವಕ್ಕೆ ಜಯವಾಗಿದೆ. ಇದು ದೇಶ ರಕ್ಷಣೆ ಮಾಡುವ ಶಕ್ತಿಗಳ ಗೆಲುವು ಎಂದು ಆರ್‌ಎಸ್‌ಎಸ್ ಸಹಕಾರ್ಯವಾಹಕ ಭಯ್ಯಾಜಿ ಜೋಷಿ ಬಣ್ಣಿಸಿ ಬಿಜೆಪಿ ಗೆಲುವಿನ ಖುಷಿಯನ್ನು ಹಂಚಿಕೊಂಡಿದ್ದಾರೆ.
Advertisement
Advertisement
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸ ಸರ್ಕಾರ ಸಾಮಾನ್ಯ ಜನರ ಸಮಸ್ಯೆ ಬಗೆ ಹರಿಸಲು ಮುಂದಾಗಬೇಕು. ಮಾನವೀಯತೆಯ ಗೆಲುವನ್ನು ಇಲ್ಲಿ ಕಾಣಬಹುದಾಗಿದೆ. ಬಿಜೆಪಿ ಈ ಗೆಲುವಿನಿಂದ ಮತ್ತೊಮ್ಮೆ ಮೋದಿ ಸರ್ಕಾರ ಆಡಳಿತಕ್ಕೆ ಬರುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Advertisement
Advertisement
ಲೋಕಸಭಾ ಫಲಿತಾಂಶ ನೋಡುವುದಾದರೆ ಎನ್‍ಡಿಎ 349 ಸ್ಥಾನ ಗಳಿಸಿದ್ದರೆ, ಯುಪಿಎ 82 ಹಾಗೂ ಇತರೇ 111 ಸ್ಥಾನವನ್ನು ಗೆದ್ದಿದೆ. ಹಾಗೆಯೇ ಕರ್ನಾಟಕದಲ್ಲಿ ಇದ್ದ 28 ಕ್ಷೇತ್ರದಲ್ಲಿ ಬಿಜೆಪಿ 25 ಕ್ಷೇತ್ರದಲ್ಲಿ ಭರ್ಜರಿ ಜಯ ಗಳಿಸಿದೆ. ಸದ್ಯ ರಾಜ್ಯದಲ್ಲಿ ಆಡಳಿತದಲ್ಲಿರುವ ಮೈತ್ರಿ ಸರ್ಕಾರದ ಅಭ್ಯರ್ಥಿಗಳು 2 ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಅದರಲ್ಲಿ ಕಾಂಗ್ರೆಸ್ 1 ಹಾಗೂ ಜೆಡಿಎಸ್ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ.