LatestLeading NewsMain PostNational

ಬಡತನ, ನಿರುದ್ಯೋಗ, ಸಂಪತ್ತಿನ ಅಸಮಾನತೆ ಅಪಾಯಕಾರಿಯಾಗುತ್ತಿದೆ – RSS ಬೇಸರ

ನವದೆಹಲಿ/ಬೆಂಗಳೂರು: ದೇಶದ ಆರ್ಥಿಕ ಸ್ಥಿತಿಗೆ ಸ್ವತಃ ಆರ್‌ಎಸ್‌ಎಸ್ (RSS) ಕಳವಳ ವ್ಯಕ್ತಪಡಿಸಿದೆ.

ದೆಹಲಿಯಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್‌ಎಸ್‌ಎಸ್ (RSS) ಪ್ರಧಾನ ಕಾರ್ಯದರ್ಶಿ ದತ್ತಾತ್ರೆಯ ಹೊಸಬಾಳೆ, ದೇಶದಲ್ಲಿ ಇಂದಿಗೂ 20 ಕೋಟಿಗೂ ಹೆಚ್ಚು ಜನ ಬಡತನದ ರೇಖೆಗಿಂತ ಕೆಳಗಿದ್ದಾರೆ. 4 ಕೋಟಿ ನಿರುದ್ಯೋಗ (Unemployment) ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಸ್ಕ್ಯಾನ್‌ಮಾಡಿ `ಸಿದ್ರಾಮುಲ್ಲನ ಉಗ್ರಭಾಗ್ಯ’ ಲೀಲೆ ನೋಡಿ – PayCM ಅಭಿಯಾನಕ್ಕೆ ಬಿಜೆಪಿ ಟಕ್ಕರ್

ದೇಶದ ಶೇ.20ರಷ್ಟು ಸಂಪತ್ತು ಕೇವಲ ಶೇ.1ರಷ್ಟು ಜನರ ಕೈಯಲ್ಲಿದೆ. ದೇಶದ ಶೇ.50ರಷ್ಟು ಮಂದಿ ಕೈಯಲ್ಲಿರೋದು ಶೇ.13ರಷ್ಟು ಸಂಪತ್ತು ಅಷ್ಟೇ. ದೇಶದ ಪಾಲಿಗೆ ಈ ಬಡತನ, ನಿರುದ್ಯೋಗ, ಸಂಪತ್ತಿನ ಅಸಮಾನತೆ ಅಪಾಯಕಾರಿಯಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದಸರಾ ಸಂಭ್ರಮ – 85 ದೇಶಗಳ 1.50 ಲಕ್ಷ ಭಕ್ತರಿಂದ ಪ್ರಾರ್ಥನೆ

ಹೊಸಬಾಳೆಯವರ ಈ ಮಾತು ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ್ರೆ, ವಿಪಕ್ಷಗಳಿಗೆ ಅಸ್ತ್ರ ಒದಗಿಸಿಕೊಟ್ಟಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ದಿಗ್ವಿಜಯ್ ಸಿಂಗ್ (Digvijaya Singh), ಇದು ಭಾರತ್ ಜೋಡೋ ಯಾತ್ರೆಯ ಪರಿಣಾಮ ಎಂದು ಕುಟುಕಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿ, ಇದೇ ಭಾರತದ ಸದ್ಯದ ಸ್ಥಿತಿ ಗರಿ. ಈಗ ಅಚ್ಚೇದಿನದ ಅಸಲಿಯತ್ತಿನ ಬಗ್ಗೆ ದೊಡ್ಡ ಪ್ರಶ್ನೆ ಎದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಬಿಜೆಪಿ ಸರ್ಕಾರ ಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದಿದ್ದಾರೆ. ಆದರೆ ಬಿಜೆಪಿ ಮಾತ್ರ ಹೊಸಬಾಳೆಯವರ ಮಾತನ್ನು ಸಮರ್ಥಿಸಿದೆ. ಬಿಜೆಪಿಯ ಮೂಲ ಉದ್ದೇಶವೇ ಅಂತ್ಯೋದಯ. ಹಿಂದಿನ ಸರ್ಕಾರಗಳಿಂದ ಅಭಿವೃದ್ಧಿ ಕುಂಠಿತವಾಗಿತ್ತು. ನಮ್ಮ ಸರ್ಕಾರ ಅದನ್ನು ಹೋಗಲಾಡಿಸಿದೆ. ಮಧ್ಯವರ್ತಿಗಳ ಕಾಟ ತಪ್ಪಿಸಿದೆ ಎಂದು ಶಾಸಕ ಪಿ.ರಾಜೀವ್ ತಿಳಿಸಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button