ಬೆಂಗಳೂರು: ಆರ್‌ಎಸ್‌ಎಸ್ (RSS) ಮುಖಂಡ, ಮಾಜಿ ಪರಿಷತ್ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ.
ಬುಧವಾರ ಬೆಳಗ್ಗೆ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿ(Narahari) ವಿಧಿವಶರಾದರು.
ಓಂ ಶಾಂತಿ.
ಸಂಘದ ಜ್ಯೇಷ್ಠ ಕಾರ್ಯಕರ್ತರು, ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿದ್ದ ಶ್ರೀ ಕೃ ನರಹರಿ ಅವರಿಗೆ ನನ್ನ ಭಾವಪೂರ್ಣ ಸಂತಾಪಗಳು. pic.twitter.com/mC3CSzNX5W
— N Ravi Kumar (@nrkbjp) October 8, 2025
ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದನ್ನೂ ಓದಿ: ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್ ಮಿನಿಸ್ಟರ್- ಜೆಡಿಎಸ್ ಕಿಡಿ