-ಮೋದಿ ಮೈತ್ರಿ ಆಹ್ವಾನ ತಿರಸ್ಕರಿಸಿದ್ದಕ್ಕೆ ಹೇಮಂತ್ ಸೊರೇನ್ ಬಂಧನ ಆರೋಪ
ನವದೆಹಲಿ: ಆರ್‌ಎಸ್‌ಎಸ್ (RSS) ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು ಎಂದು ಪ್ರಯತ್ನಿಸಿದರೆ ಸಾವನ್ನಪ್ಪುತ್ತೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು (Mallikarjun Kharge) ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Advertisement
ಐ.ಎನ್.ಡಿ.ಐ.ಎ ಒಕ್ಕೂಟ ಸಭೆಯಲ್ಲಿ ಮಾತನಾಡಿದ ಅವರು ಆರ್‌ಎಸ್‌ಎಸ್ ಹಾಗೂ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ದೇಶಕ್ಕಾಗಿ ಏನು ಮಾಡಿದೆ? ಬ್ರಿಟಿಷರ ಪರವಾಗಿ ಸರ್ಕಾರಿ ನೌಕರಿ ಮಾಡುವಂತೆ ಹಾಗೂ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗಿಯಾಗದಂತೆ ಹೇಳುತ್ತಿತ್ತು ಎಂದಿದ್ದಾರೆ. ಇದನ್ನೂ ಓದಿ: ಮತ್ತೆ ಮೋದಿಯನ್ನ ಪ್ರಧಾನಿ ಮಾಡೋದು ಪರಿಶಿಷ್ಟರ ಸಂಕಲ್ಪ: ಪ್ರಹ್ಲಾದ್ ಜೋಶಿ
Advertisement
ನಾವು ಚುನಾವಣಾ (Lok Sabha Election 2024) ಪ್ರಚಾರ ಮಾಡದಂತೆ ತಡೆಯಲಾಗುತ್ತಿದೆ. ಪ್ರಜಾಪ್ರಭುತ್ವದ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಐಟಿ, ಇಡಿ ಸಿಬಿಐ ಬಳಿಕ ವಿರೋಧ ಪಕ್ಷ ಇರಲಿ ತಮ್ಮ ಮೈತ್ರಿ ಪಕ್ಷಗಳನ್ನು ಹೆದರಿಸುತ್ತಿದ್ದಾರೆ. ಬೆದರಿಸಿ ಶಾಸಕರು, ಸಂಸದರನ್ನು ಖರೀದಿಸಿ ಸರ್ಕಾರ ರಚನೆ ಮಾಡಿದ್ದಾರೆ. ಮೋದಿಯವರು ತೊಲಗುವವರೆಗೂ ದೇಶದಲ್ಲಿ ಸಮೃದ್ಧಿ ಇರದು ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
Advertisement
Advertisement
ಸಂವಿಧಾನ ಉಳಿಸಬೇಕು, ಸಂವಿಧಾನ ಉಳಿದರೆ ಮೀಸಲಾತಿ, ಬಡವರಿಗೆ ಹಕ್ಕುಗಳು ಲಭಿಸಲಿದೆ. ನಾವು ದೇಶಕ್ಕೆ ಸ್ವಾತಂತ್ರ್ಯ ಕೊಡಿಸಲು ರಕ್ತವನ್ನು ಹರಿಸಿದ್ದೇವೆ. ಇಂದಿರಾಗಾಂಧಿ, ರಾಜೀವ್ ಗಾಂಧಿ ಜೀವವನ್ನು ತೆತ್ತಿದ್ದಾರೆ. ಈಗ ದೇಶದಲ್ಲಿ ಕೆಲವು ನಾಯಕರ ಅಭಿವೃದ್ಧಿಯನ್ನಲ್ಲ, ಮೋದಿಯನ್ನ ಬಯಸುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
ಮೈತ್ರಿಗಾಗಿ ಹೇಮಂತ್ ಸೊರೇನ್‍ಗೆ ಮೋದಿಯಿಂದ ಆಹ್ವಾನ ಬಂದಿತ್ತು. ಮೈತ್ರಿ ಒಪ್ಪದೇ ಇರುವುದಕ್ಕೆ ಅವರನ್ನು ಬಂಧಿಸಲಾಯಿತು. ಅವರನ್ನು ಚುನಾವಣೆ ಹೊತ್ತಲ್ಲಿ ಬಂಧಿಸುವ ಅಗತ್ಯ ಏನಿತ್ತು? ಬಿಜೆಪಿ ಸೋಲಿಸುವ ತನಕ ಶಾಂತಿ ನೆಲೆಸುವುದಿಲ್ಲ. 140 ಕೋಟಿ ಜನರ ರಕ್ಷಿಸಲು ಬಿಜೆಪಿ ಸೋಲಿಸಬೇಕು ಎಂದು ಅವರು ಕರೆಕೊಟ್ಟಿದ್ದಾರೆ. ಇದನ್ನೂ ಓದಿ: ವಿಕಸಿತ ಭಾರತಕ್ಕಾಗಿ ಈ ಚುನಾವಣೆ; ಜನ ಅಭಿವೃದ್ಧಿಯ ಟ್ರೇಲರ್ ಮಾತ್ರ ನೋಡಿದ್ದಾರೆ ಎಂದ ಮೋದಿ