ತಿರುವನಂತಪುರಂ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದ ಘಟನೆ ಕೇರಳದ (Kerala) ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ.
ಬೈಕ್‍ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಕಚೇರಿ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಕಚೇರಿಯ ಕಿಟಕಿ ಗಾಜುಗಳು ಒಡೆದಿವೆ. ಆದರೆ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಇಂದು ಕೇರಳ ಬಂದ್‍ಗೆ ಕರೆ ನೀಡಿದ್ದು, ಹಿಂಸಾಚಾರ ಆರಂಭವಾಗಿದೆ. ಕಣ್ಣೂರಿನಲ್ಲಿ ದ್ವಿಚಕ್ರ ವಾಹನದ ಮೇಲೆ ಕಚ್ಚಾ ಬಾಂಬ್ ಎಸೆಯಲಾಗಿದೆ. ಕೊಲ್ಲಂನಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸುವ ಸಮಯದಲ್ಲಿ ಇಬ್ಬರು ಪೊಲೀಸರಿಗೆ ಬೈಕ್ ಡಿಕ್ಕಿ ಹೊಡೆದಿದೆ.
ಕೊಟ್ಟಾಯಂ ಜಿಲ್ಲೆಯ ಎರಟ್ಟುಪೆಟ್ಟಾದಲ್ಲಿ, ಪ್ರತಿಭಟನಾಕಾರರನ್ನು ಚದುರಿಸುವ ಸಮಯದಲ್ಲಿ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ. ಹಲವೆಡೆ ಪಿಎಫ್‍ಐ ಕಾರ್ಯಕರ್ತರು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದ್ದಾರೆ.
ಆರ್‌ಎಸ್‍ಎಸ್ ಕಚೇರಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದು ಇದೇ ಮೊದಲಲ್ಲ. ಜುಲೈನಲ್ಲಿಯೂ ಕಚೇರಿಯ ಮೇಲೆ ಬಾಂಬ್‍ಗಳನ್ನು ಎಸೆಯಲಾಯಿತು ಮತ್ತು ಸಿಪಿಐ(ಎಂ) ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರ್‌ಎಸ್‍ಎಸ್ ಆರೋಪಿಸಿತ್ತು.