ತಿರುವನಂತಪುರಂ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು(PFI) ನಿಷೇಧ ಮಾಡಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು(RSS) ನಿಷೇಧಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.
ಕೇರಳದ ಕಾಂಗ್ರೆಸ್ ಸಂಸದ, ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕ ಕೋಡಿಕುನ್ನಿಲ್ ಸುರೇಶ್(Kodikunnil Suresh), ಪಿಎಫ್‌ಐ ನಿಷೇಧವು ಪರಿಹಾರವಲ್ಲ. ಆರ್‌ಎಸ್‌ಎಸ್ ಮತ್ತು ಪಿಎಫ್‌ಐ ಎರಡೂ ಸಮಾನವಾಗಿವೆ. ಆರ್‌ಎಸ್‌ಎಸ್ ಕೂಡ ದೇಶಾದ್ಯಂತ ಹಿಂದೂ ಕೋಮುವಾದವನ್ನು ಹರಡುತ್ತಿದೆ. ಆದ್ದರಿಂದ ಸರ್ಕಾರ ಎರಡನ್ನೂ ನಿಷೇಧಿಸಬೇಕು. ಪಿಎಫ್‌ಐ ಮಾತ್ರ ಏಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪಿಎಫ್‌ಐ ಹೆಸರಿಲ್ಲಿ ಸಭೆ ನಡೆಸಿದ್ರೆ ಬೀಳುತ್ತೆ ಕೇಸ್- ಶಂಕೆ ಬಂದರೆ ಅರೆಸ್ಟ್
Advertisement
Advertisement
ಉಗ್ರ ಸಂಘಟನೆಗಳ ಜೊತೆ ನೇರವಾದ ಸಂಬಂಧ ಹೊಂದಿದ ಹಿನ್ನೆಲೆಯಲ್ಲಿ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ಕಾನೂನುಬಾಹಿರ ಸಂಘ ಎಂದು ಘೋಷಿಸಿ ತಕ್ಷಣದಿಂದ ಜಾರಿಗೆ ಬರುವಂತೆ 5 ವರ್ಷಗಳ ಅವಧಿಗೆ ನಿಷೇಧ ಮಾಡಿ ಗೃಹ ಸಚಿವಾಲಯ(Ministry of Home Affairs) ಆದೇಶ ಪ್ರಕಟಿಸಿದೆ.
Advertisement
ಪಿಎಫ್‌ಐ ಅಂಗ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳವನ್ನು ನಿಷೇಧಿಸಲಾಗಿದೆ.
Advertisement
ಸೆಪ್ಟೆಂಬರ್ 22 ಮತ್ತು ಸೆಪ್ಟೆಂಬರ್ 27 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA), ಜಾರಿ ನಿರ್ದೇಶನಾಲಯ (ED) ಮತ್ತು ರಾಜ್ಯ ಪೊಲೀಸರು PFI ಮೇಲೆ ದಾಳಿ ನಡೆಸಿತ್ತು. ಮೊದಲ ಸುತ್ತಿನ ದಾಳಿಯಲ್ಲಿ ಪಿಎಫ್‌ಐಗೆ ಸೇರಿದ 106 ಮಂದಿಯನ್ನು ಬಂಧಿಸಲಾಗಿದ್ದರೆ ಎರಡನೇ ಸುತ್ತಿನ ದಾಳಿ 247 ಮಂದಿಯನ್ನು ಬಂಧಿಸಿತ್ತು.