Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖರ್ಗೆ ಕೋಟೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಹೆಜ್ಜೆ – ಚಿತ್ತಾಪುರದಲ್ಲಿ ಪಥಸಂಚಲನ ಯಶಸ್ವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಖರ್ಗೆ ಕೋಟೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಹೆಜ್ಜೆ – ಚಿತ್ತಾಪುರದಲ್ಲಿ ಪಥಸಂಚಲನ ಯಶಸ್ವಿ

Districts

ಖರ್ಗೆ ಕೋಟೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಹೆಜ್ಜೆ – ಚಿತ್ತಾಪುರದಲ್ಲಿ ಪಥಸಂಚಲನ ಯಶಸ್ವಿ

Public TV
Last updated: November 16, 2025 6:12 pm
Public TV
Share
2 Min Read
RSS Route March in Chittapur
SHARE

ಕಲಬುರಗಿ: ಒಂದು ತಿಂಗಳಿನಿಂದ ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಚಿತ್ತಾಪುರ (Chittapur) ಆರ್‌ಎಸ್‌ಎಸ್‌ ಪಥಸಂಚಲನ (RSS Route March) ಕೊನೆಗೂ ಇಂದು ಯಶಸ್ವಿಯಾಗಿ ನಡೆದಿದೆ. ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತವರಿನಲ್ಲಿ ಭಗವಾ ಧ್ವಜ ಹಾರಿಸಿ ಆರ್‌ಎಸ್‌ಎಸ್ ಕಾರ್ಯಕರ್ತರು ಹೆಜ್ಜೆ ಹಾಕಿದರು.

ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಿಂದ ಆರಂಭವಾಗಿ ಅಂಬೇಡ್ಕರ್ ಸರ್ಕಲ್, ಬಸವ ಆಸ್ಪತ್ರೆ,ಎಚ್‌ಡಿಎಫ್‌ಸಿ ಬ್ಯಾಂಕ್ ರಸ್ತೆ, ಬಸವೇಶ್ವರ ಸರ್ಕಲ್‌ ಮೂಲಕ ಸಾಗಿ ಬಜಾಜ್ ಕಲ್ಯಾಣ ಮಂಟಪದಲ್ಲಿ ಮುಕ್ತಾಯವಾಯಿತು. ಹೈಕೋರ್ಟ್‌ ಆದೇಶದಂತೆ 300 ಜನ ಗಣವೇಶಧಾರಿಗಳು ಹಾಗೂ 50 ಜನ ಬ್ಯಾಂಡ್ ವಾದಕರಿಗೆ ಮಾತ್ರ ಭಾಗಿಯಾಗಲು ಅವಕಾಶ ನೀಡಲಾಗಿತ್ತು.

ಆರ್‌ಎಸ್‌ಎಸ್‌ 100 ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ನಡೆದ ಪಥಸಂಚಲನದಲ್ಲಿ ಭಾಗಿಯಾದ ಗಣವೇಷಧಾರಿಗಳಿಗೆ ಮಹಿಳೆಯರು, ಮಕ್ಕಳು, ಸಾರ್ವಜನಿಕರು ಪುಷ್ಪಾರ್ಚನೆ ಮಾಡಿ ಭವ್ಯ ಸ್ವಾಗತ ನೀಡಿದರು.ರಸ್ತೆಯ ಎರಡೂ ಬದಿಯಲ್ಲಿ ನಿಂತು ಗಣವೇಷಧಾರಿಗಳ ಮೇಲೆ ಹೂವಿನ ಮಳೆ ಸುರಿಸಿದರು. ಇದನ್ನೂ ಓದಿ:  ಸಂಪುಟ ಪುನಾರಚನೆಗೆ ಹೈಕಮಾಂಡ್‌ ಒಪ್ಪಿಗೆ – ಯಾರು ಔಟ್‌? ಯಾರು ಇನ್‌?

 

ಮಧ್ಯಾಹ್ನ 3:45ಕ್ಕೆ ಆರಂಭವಾದ ಪಥ ಸಂಚಲನ 4:22ಕ್ಕೆ ಮುಕ್ತಾಯವಾಯಿತು. ಸರಿಸುಮಾರು 47 ನಿಮಿಷಗಳ ಕಾಲ ಒಟ್ಟು 1.25 ಕಿ.ಮೀ ಪಥಸಂಚಲನ ನಡೆಯಿತು.

ಬಿಗಿ ಭದ್ರತೆ:
ಪಥಸಂಚಲನ ನಡೆಯುವ 1.25 ಕಿ.ಮೀ. ಸಾಗುವ ದಾರಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರು. ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ನೇತೃತ್ವದಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌, ಕೆಎಸ್‌ಆರ್‌ಪಿ ಡಿಎಆರ್ ತುಕಡಿ ಸೇರಿದಂತೆ 650ಜನ ಪೋಲಿಸರು 250ಜನ ಹೋಮ್ ಗಾರ್ಡ್ ನಿಯೋಜನೆ ಮಾಡಲಾಗಿತ್ತು.

ಪಥಸಂಚಲನ ನಡೆಯುವ ಮಾರ್ಗದಲ್ಲಿ ಪುರಸಭೆಯಿಂದ 12 ಹಾಗೂ ಪೋಲಿಸ್ ಇಲಾಖೆಯಿಂದ 44 ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. 5 ಡ್ರೋಣ್ ಕ್ಯಾಮೆರಾ ಮೂಲಕ ಜನರ ಚಲನವಲನದ ಮೇಲು ಖಾಕಿ ಪಡೆ ಹದ್ದಿನ ಕಣ್ಣಿಟ್ಟಿತ್ತು. ಪಥ ಸಂಚಲನ ನಡೆಯುವ ಮಾರ್ಗದಲ್ಲಿ ಒಟ್ಟು 200 ಧ್ವಜ ಹಾಗೂ ಬಂಟಿಂಗ್, ಪ್ಲೆಕ್ಸ್, ಕಟ್ಟಲು ಪುರಸಭೆ ಅನುಮತಿ ನೀಡಿತ್ತು.

ಪಥಸಂಚಲನದಲ್ಲಿ ಭಾಗಿಯಾಗಲು ಬೇರೆ ಕಡೆಯಿಂದಲೂ ಕಾರ್ಯಕರ್ತರು ಆಗಮಿಸಿದ್ದರು. ಆದರೆ ಆರ್‌ಎಸ್‌ಎಸ್‌ ಮೊದಲೇ ಪಟ್ಟಿಯಲ್ಲಿ ನೀಡಿದ್ದ ವ್ಯಕ್ತಿಗಳಿಗೆ ಮಾತ್ರ ಪೊಲೀಸರು ಅನುಮತಿ ನೀಡಿದ್ದರು. ಚಿತ್ತಾಪುರ ಹೊರತು ಪಡಿಸಿ ಬೇರೆ ಕಡೆಯಿಂದ ಆಗಮಿಸಿದ ಕಾರ್ಯಕರ್ತರಿಗೆ ಪಥಸಂಚಲನದಲ್ಲಿ ಭಾಗಿಯಾಗಲು ಅವಕಾಶ ನೀಡಿರಲಿಲ್ಲ.

TAGGED:ChittapurKalaburagiPriyank Khargerssಆರ್‍ಎಸ್‍ಎಸ್ಕಲಬುರಗಿಚಿತ್ತಾಪುರಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Narendra Modi great friend of mine Donald Trump Announces 26 percentage Discounted Reciprocal Tariff On India
Latest

ಟ್ರಂಪ್ ಟ್ಯಾರಿಫ್‌ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್‌ ಸುಪ್ರೀಂ ಕೋರ್ಟ್‌ ಆದೇಶ

Public TV
By Public TV
47 seconds ago
Pralhad Joshi 2
Bagalkot

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ – ಕಾಂಗ್ರೆಸ್‌ ಸರ್ಕಾರ ಇದ್ದಾಗಲೇ ಯಾಕೆ ಹೀಗಾಗುತ್ತೆ: ಜೋಶಿ ಪ್ರಶ್ನೆ

Public TV
By Public TV
16 minutes ago
Yathindra Siddaramaiah 1
Latest

ಆಧಾರರಹಿತ ಆರೋಪ ಮಾಡಿ ಅವಮಾನಿಸಿದ್ದರೆ ಸ್ನೇಹಮಯಿ ವಿರುದ್ಧ ಕ್ರಮ ಆಗ್ಬೇಕು: ಯತೀಂದ್ರ ಸಿದ್ದರಾಮಯ್ಯ

Public TV
By Public TV
56 minutes ago
Contractors Association
Dharwad

ಬಾಕಿ ಬಿಲ್​ 37,000 ಕೋಟಿ ಬಿಡುಗಡೆಗೆ ಆಗ್ರಹ – ಮಾ.6 ರಂದು ಬೆಂಗಳೂರಲ್ಲಿ ಮುಷ್ಕರಕ್ಕೆ ಗುತ್ತಿಗೆದಾರರ ಸಂಘ ಕರೆ

Public TV
By Public TV
1 hour ago
Bagalkote 1
Bagalkot

ಬಾಗಲಕೋಟೆಯಲ್ಲಿ ಉದ್ವಿಗ್ನ – ಮುಸ್ಲಿಂ ಮುಖಂಡರು ಗೈರು, ಶಾಂತಿ ಸಭೆ ವಿಫಲ

Public TV
By Public TV
1 hour ago
wife also hangs herself a week after husband suicide in bhadravati
Crime

ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೆ ಪತ್ನಿಯೂ ನೇಣಿಗೆ ಶರಣು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?