ಹೈದರಾಬಾದ್: ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ರಾಜ್ಯ ರಸ್ತೆ ಸಾರಿಗೆ ಬಸ್ ಕಂಡಕ್ಟರ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು 50 ವರ್ಷದ ಶ್ರೀನಿವಾಸ್ ಗುಪ್ತಾ ಎಂದು ಗುರುತಿಸಲಾಗಿದ್ದು, ಈತ ರಾಜ್ಯ ರಸ್ತೆ ಸಾರಿಗೆ ಬಸ್ಸಿನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದನು. ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ವೇಳೆ ಬಸ್ಸಿನಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದನು. ಅಲ್ಲದೆ ಇತರೆ ಮಹಿಳೆಯರೊಂದಿಗೂ ಕೂಡ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಪೊಲೀಸರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.
Advertisement
Advertisement
ವಿದ್ಯಾರ್ಥಿನಿ ತಾನು ಕಾಲೇಜಿಗೆ ಹೋಗುವಾಗ ಬಸ್ ಕಂಡಕ್ಟರ್ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರಿಗೆ ಫೋನ್ ಮೂಲಕ ಸಂದೇಶವೊಂದನ್ನು ಕಳುಹಿಸಿದ್ದರು. ಕಂಡಕ್ಟರ್ ಪ್ರತಿನಿತ್ಯ ಈ ರೀತಿ ಮಾಡುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.
Advertisement
ದೂರಿನ ನಂತರ ಶೀ ತಂಡ (ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಚುಡಾಯಿಸೋದನ್ನ ತಡೆಗಟ್ಟಲು ರಚಿಸಲಾಗಿರೋ ತಂಡ) ದ ಸಿಬ್ಬಂದಿ ಬಸ್ ಕಂಡಕ್ಟರ್ ನನ್ನು ಪತ್ತೆ ಮಾಡಿದ್ದು, ಈಗ ಆರೋಪಿಯನ್ನು ಬಂಧಿಸಲಾಗಿದೆ.
Advertisement
ಐಪಿಸಿ ಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.