ಜೈಪುರ: ಆರ್‌ಟಿಐ ಕಾಯಕರ್ತನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಆರ್‌ಟಿಐ ಕಾಯಕರ್ತ ಅಮರರಾಮ್ ಗೋದಾರ್ ಹಲ್ಲೆಗೊಳಗಾದ ವ್ಯಕ್ತಿ. ಇವರು ಭ್ರಷ್ಟಾಚಾರ ಮತ್ತು ಗ್ರಾಮಪಂಚಾಯಿತಿ ಏರಿಯಾದಲ್ಲಿ ನಡೆಯತ್ತಿದ್ದ ಅಕ್ರಮ ಮದ್ಯ ಮಾರಾಟದ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಗೋದಾರ್ ಅವರ ಮೇಲೆ ಎಂಟು ಜನ ದುಷ್ಕರ್ಮಿಗಳು ಹಲ್ಲೆ ನಡೆಸಿ, ಅವರ ಮೇಲೆ ಕಬ್ಬಿಣ ಸಲಾಕೆಯಿಂದ ಬಡಿದು ಕೈಗಳನ್ನು ಮುರಿದಿದ್ದಾರೆ. ಅಲ್ಲದೆ, ಮೊಳೆಗಳಿಂದ ಕೈಕಾಲುಗಳಿಗೆ ಚುಚ್ಚಿ ಚಿತ್ರಹಿಂಸೆ ನೀಡಿದ್ದಾರೆ.
ನಂತರ ತೀವ್ರ ಗಾಯಗೊಂಡಿದ್ದ ಅವರನ್ನು ನೋಡಿ ಗೋದಾರ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಗೊದಾರ್ ಅವರನ್ನು ಜೋದ್‌ಪುರ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇದನ್ನೂ ಓದಿ: ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – 2 ಸಾವು, 4 ಮಂದಿಗೆ ಗಾಯ
ಬರ್ಮರ್ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಭಾಗವ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗೋದಾರ್ ಆರೋಗ್ಯವನ್ನು ವಿಚಾರಿಸಿದ್ದಾರೆ. ಜೊತೆಗೆ ಘಟನೆ ಕುರಿತು ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪಿಯನ್ನು ಬಚಾವ್ ಮಾಡಲು ಖತರ್ನಾಕ್ ಪ್ಲಾನ್ ಮಾಡಿದ್ದ ತಂದೆ ಅರೆಸ್ಟ್!