– ನೈತಿಕತೆಯಿಂದ ಕೊಡಲ್ಲ, ಹೈಕಮಾಂಡ್ ರಾಜೀನಾಮೆ ಪಡೆಯುವ ಸಮಯ ಬಂದಿದೆ ಎಂದ ದೂರುದಾರ
ಮೈಸೂರು: ಮುಡಾ ಹಗರಣ (MUDA Scam) ತನಿಖೆಯನ್ನು ನ್ಯಾಯಾಲಯ ಸಿಬಿಐಗೆ ಕೊಟ್ಟೇ ಕೊಡುತ್ತದೆ. ಸಿಎಂ ಸಿದ್ದರಾಮಯ್ಯ ನೈತಿಕತೆ ಕಳೆದು ಕೊಂಡಿದ್ದಾರೆ. ಹೀಗಾಗಿ ಅವರಿಗೆ ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲ್ಲ. ಬದಲಾಗಿ ಹೈಕಮಾಂಡ್ ಅವರ ರಾಜೀನಾಮೆ ಪಡೆಯುವ ಕ್ಷಣ ಹತ್ತಿರ ಬಂದಿದೆ ಎಂದು ದೂರುದಾರ ಸ್ನೇಹಮಹಿ ಕೃಷ್ಣ (Snehamayi Krishna) ʻಪಬ್ಲಿಕ್ ಟಿವಿʼಗೆ ಹೇಳಿದ್ದಾರೆ.
Advertisement
ಸಿದ್ದರಾಮಯ್ಯಗೆ (Siddaramaiah) ಮಾತ್ರವಲ್ಲ ಮುಡಾ ಹಗರಣದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಸಂಕಷ್ಟ ಕಟ್ಟಿಟ್ಟ ಬುತ್ತಿ. ಎಲ್ಲರಿಗೂ ಶಿಕ್ಷೆ ಕೊಡಿಸಿಯೇ ಕೊಡಿಸುತ್ತಿನಿ. ಮುಡಾಕ್ಕೆ ಎಲ್ಲಾ ಸೈಟ್ ವಾಪಸ್ ಬರಬೇಕು. ಎಲ್ಲರಿಗೂ ಶಿಕ್ಷೆ ಕೊಡಿಸುವವರೆಗೂ ನಾನು ಈ ಹೋರಾಟ ನಿಲ್ಲಿಸಲ್ಲ ಎಂದು ಶಪಥ ಮಾಡಿದ್ದಾರೆ. ಇದನ್ನೂ ಓದಿ: 2027ಕ್ಕೆ ಚಂದ್ರಯಾನ-4, 2026ಕ್ಕೆ ಗಗನಯಾನ: ಜಿತೇಂದ್ರ ಸಿಂಗ್
Advertisement
ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ:
ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಯನ್ನು ಜ.27ರಂದು ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಧಾರವಾಡ ಹೈಕೋರ್ಟ್ ಇಂದು 10:30ಕ್ಕೆ ವೇಳೆಗೆ ಪ್ರಕಟಿಸಲಿದೆ. ಇದನ್ನೂ ಓದಿ: ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಹೆದ್ದಾರಿ ಪ್ರಾಧಿಕಾರ ಶಾಕ್; ಬಿಡದಿ ಬಳಿಯ ಎಕ್ಸಿಟ್ ರೋಡ್ ಬಂದ್
Advertisement
Advertisement
ಪ್ರಕರಣವನ್ನು ಸಿಬಿಐಗೆ ವಹಿಸಲು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಧೀರ್ಘವಾಗಿ ವಾದ- ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಧಾರವಾಡ ಪೀಠ ಆದೇಶವನ್ನು ಕಾಯ್ದಿರಿಸಿತ್ತು. ಪ್ರತಿಹಂತದಲ್ಲೂ ಲೋಕಾಯುಕ್ತದ ತನಿಖಾ ವರದಿಯನ್ನು ಪಡೆದಿರೋ ಹೈಕೋರ್ಟ್, ಎಲ್ಲವನ್ನೂ ಕೂಲಂಕುಶವಾಗಿ ಪರಿಶೀಲಿಸಿದೆ. ಹೀಗಾಗಿ ಇಂದು ಹೈಕೋರ್ಟ್ ನೀಡಲಿರುವ ಆದೇಶ ಸಾಕಷ್ಟು ಕುತೂಹಲ ಕೆರಳಿಸಿದೆ. ಒಂದೊಮ್ಮೆ ಸ್ನೇಹಮಯಿ ಕೃಷ್ಣ ಅರ್ಜಿ ಊರ್ಜಿತವಾಗಿ ಪ್ರಕರಣ ಸಿಬಿಐಗೆ ವರ್ಗಾವಣೆ ಆದ್ರೆ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಲಿದೆ.