– ಆರ್‌ಟಿಓ ಅಧಿಕಾರಿ ನೇಮಕಾತಿಯ ಪರೀಕ್ಷೆ ಹೇಗೆ ಇರುತ್ತೆ?
ಬೆಂಗಳೂರು: ಒಬ್ಬ ಅಧಿಕಾರಿ ಎರಡರಿಂದ ಮೂರು ಆರ್‌ಟಿಓ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಶೀಘ್ರವೇ ಖಾಲಿಯಿರುವ 271 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ನಾನು ಸಚಿವನಾದ ಮೇಲೆ ಸಾರಿಗೆ ಇಲಾಖೆಯಲ್ಲಿ ಖಾಲಿಯಿದ್ದ 2.5 ಸಾವಿರ ಹುದ್ದೆ ಭರ್ತಿಯಾಗಿವೆ. ಈಗಾಗಲೇ ಚಾಲಕ, ನಿರ್ವಾಹಕ ಹಾಗೂ ಮೆಕ್ಯಾನಿಕಲ್ ಹುದ್ದೆಗಳು ಕೂಡ ಭರ್ತಿಯಾಗಿವೆ. ರಾಜ್ಯದಲ್ಲಿ ಆರ್‌ಟಿಓ ಅಧಿಕಾರಿಗಳ ಕೊರತೆ ಎದರುರಾಗಿದ್ದು, ಈ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.
Advertisement
Advertisement
ಪರೀಕ್ಷೆ ಹೇಗಿರುತ್ತೇ?:
ಆರ್‌ಟಿಓ ಅಧಿಕಾರಿಗಳ ನೇಮಕಾತಿ ನಿಟ್ಟಿನಲ್ಲಿ ಕೆಪಿಎಸ್‍ಸಿ ಜೊತೆಗೆ ಚರ್ಚೆ ನಡೆಸಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ತರಬೇತಿ ಇರುತ್ತದೆ. ತರಬೇತಿ ಬಳಿಕವೂ ಒಂದು ಪರೀಕ್ಷೆ ನಡೆಸಿ, ಉತ್ತೀರ್ಣರಾಗುವ ಅಭ್ಯರ್ಥಿಗಳಿಗೆ ಸರ್ಕಾರಿ ಕೆಲಸ ನೀಡಲಾಗುತ್ತದೆ ಎಂದು ತಿಳಿಸಿದರು.
Advertisement
ಚೆಕ್ ಪೋಸ್ಟ್‍ಗಳಲ್ಲಿ ಹಣ ವಸೂಲಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಚೆಕ್‍ಪೋಸ್ಟ್‍ಗಳನ್ನ ಮೇಲ್ದರ್ಜೆಗೇರಿಸಲು ಚಿಂತನೆ ನಡೆಸಲಾಗಿದೆ. ವಾಹನಗಳಿಗೆ ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಸಿ, ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಈ ಮೂಲಕ ಪ್ರತಿಯೊಂದು ವ್ಯವಹಾರ ದಾಖಲಾಗಲಿದ್ದು, ಹಣ ವಸೂಲಿ ಮಾಹಿತಿ ಸಿಕ್ಕರೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದರು.
Advertisement
ಈ ಯೋಜನೆ ಯಾವಾಗ ಕಾರ್ಯರೂಪಕ್ಕೆ ಬರುತ್ತದೆ ಎಂದು ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ, ಎಲ್ಲವನ್ನೂ ಈಗಲೇ ಸರಿ ಮಾಡೋಕೆ ಆಗಲ್ಲ. ಹಂತ ಹಂತವಾಗಿ ಸರಿಪಡಿಸುತ್ತೇವೆ ಎಂದು ಸಚಿವರು ಗರಂ ಆದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv