ಅಮೇಥಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪೌರತ್ವದ ವಿವಾದ ಕುರಿತು ಕೇಂದ್ರ ಗೃಹ ಇಲಾಖೆ ನೀಡಿರುವ ನೋಟಿಸ್ ಬಗ್ಗೆ ಪ್ರಿಯಾಂಕ ಗಾಂಧಿ ಕಿಡಿಕಾರಿದ್ದಾರೆ.
ಸಹೋದರ ರಾಹುಲ್ ಪರ ಅಮೇಥಿಯಲ್ಲಿ ಪ್ರಚಾರ ನಡೆಸುತ್ತಿರುವ ಪ್ರಿಯಾಂಕ ಗಾಂಧಿ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಇಡೀ ದೇಶಕ್ಕೆ ರಾಹುಲ್ ಗಾಂಧಿ ಹಿಂದೂಸ್ತಾನಿ ಎಂಬುವುದು ಗೊತ್ತಿದೆ. ರಾಹುಲ್ ಭಾರತದಲ್ಲಿ ಹುಟ್ಟಿ ಬೆಳೆದಿದ್ದಾರೆ ಎಂಬುವುದು ತಿಳಿದಿದೆ. ಇಂತಹ ನಡೆ ಎಲ್ಲವೂ ‘ಬಕ್ವಾಸ್’ ಎಂದು ದೂರಿದರು.
Advertisement
#WATCH Priyanka Gandhi Vadra on MHA notice to Rahul Gandhi over citizenship, says," The whole of India knows that Rahul Gandhi is an Indian. People have seen him being born and grow up in India. Kya bakwaas hai yeh?" pic.twitter.com/Rgt457WMoi
— ANI (@ANI) April 30, 2019
Advertisement
ರಾಹುಲ್ ಪೌರತ್ವ ವಿವಾದ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ನೀಡಿರುವ ದೂರನ್ನು ಸ್ವೀಕರಿಸಿ ಕೇಂದ್ರ ಗೃಹ ಇಲಾಖೆ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್‍ಗೆ 15 ದಿನಗಳ ಒಳಗಾಗಿ ಪ್ರತಿಕ್ರಿಯೆ ನೀಡಬೇಕು ಎಂದು ಸೂಚಿಸಿದೆ.
Advertisement
ರಾಹುಲ್ ಗಾಂಧಿ ಅವರು ಇಂಗ್ಲೆಂಡ್ ವಿಶ್ವವಿದ್ಯಾಲಯದ ಶೈಕ್ಷಣಿಕ ಪ್ರಮಾಣ ಪತ್ರ ಹಾಗೂ ಯುಕೆ ಕಂಪನಿಯ ಪ್ರಮಾಣ ಪತ್ರದಲ್ಲಿ ಬ್ರಿಟಿಷ್ ಪೌರತ್ವವನ್ನು ಪಡೆದಿದ್ದಾರೆ. ಭಾರತೀಯರಲ್ಲದವರಿಗೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶವಿಲ್ಲ. ಆದ್ದರಿಂದ ಅವರ ನಾಮಪತ್ರವನ್ನು ಪ್ರಜಾಪ್ರತಿನಿಧಿ ಕಾಯ್ದೆ ಅಡಿ ಪರಿಶೀಲನೆ ನಡೆಸಬೇಕು ಎಂದು ದೂರಿನಲ್ಲಿ ಸುಬ್ರಮಣಿಯನ್ ಸ್ವಾಮಿ ಮನವಿ ಮಾಡಿದ್ದರು. ಇದನ್ನು ಓದಿ: ರಾಹುಲ್ ಗಾಂಧಿ ‘ಪೌರತ್ವ ವಿವಾದ’ – ವಿವರಣೆ ಕೇಳಿ ಗೃಹ ಇಲಾಖೆಯಿಂದ ನೋಟಿಸ್