ಚೆನ್ನೈ: ತಮಿಳುನಾಡಿನಲ್ಲಿ (Tamilnadu) ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ಹಲ್ಲೆ ನಡೆದಿದೆ.
ಶಬರಿಮಲೆಯಿಂದ ವಾಪಸ್ಸಾಗಿ ತಮಿಳುನಾಡಿನ ರಂಗನಾಥ್ ಸ್ವಾಮಿ (Ranganathswamy) ದೇವಸ್ಥಾನದಲ್ಲಿ ಪೂಜೆಗೆ ಆಗಮಿಸಿದ್ದರು. ಈ ವೇಳೆ ದೇವಸ್ಥಾನ ಆಡಳಿತ ಮಂಡಳಿಯು ಕೆಲವರಿಗೆ ವಿಶೇಷ ದರ್ಶನಕ್ಕೆ ಅವಕಾಶ ನೀಡುತ್ತಿತ್ತು. ಹೀಗಾಗಿ ಈ ಕ್ರಮವನ್ನು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಪ್ರಶ್ನಿಸಿದರು.
Advertisement
Advertisement
ಈ ವೇಳೆ ಘರ್ಷಣೆ ಏರ್ಪಟ್ಟು ಮಾಲಾಧಾರಿಗಳ ಮೇಲೆ ಹಲ್ಲೆ ನಡೆದಿದೆ. ಸದ್ಯ ಘಟನೆಯನ್ನು ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಖಂಡಿಸಿದ್ದಾರೆ. ಹಿಂದೂ ಧರ್ಮದಲ್ಲಿ ನಂಬಿಕೆ ಇಲ್ಲದ ಸರ್ಕಾರದ ಅವಧಿಯಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ಇಂತಹ ದುರ್ವರ್ತನೆ ಕಾರಣಕ್ಕಾಗಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ (BJP) ಬಯಸುತ್ತಿದೆ ಎಂದಿದ್ದಾರೆ.
Advertisement
ದೇವಸ್ಥಾನ ಆಡಳಿತ ಮಂಡಳಿ ಮತ್ತು ಸರ್ಕಾರದ ವಿರುದ್ಧ ಸ್ಥಳೀಯ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.