ತುಮಕೂರು: ಜಮೀನು ವ್ಯಾಜ್ಯದ ಕುರಿತು ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇವೆಯಿಂದ ಅಮಾನತುಗೊಂಡಿರುವ ತುಮಕೂರು ಜಿಲ್ಲೆ ಮಧುಗಿರಿ ಡಿವೈಎಸ್‌ಪಿ (Madhugiri DySP) ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜಮೀನು ವ್ಯಾಜ್ಯಕ್ಕೆ (Land Dispute) ಸಂಬಂದಿಸಿದಂತೆ ದೂರು ಕೊಡಲು ಬಂದ ಮಹಿಳೆಗೆ ಡಿವೈಎಸ್‍ಪಿ ತಮ್ಮ ಕಚೇರಿಯಲ್ಲೇ ಅಸಭ್ಯ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡಿವೈಎಸ್‍ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶ ಅಲೋಕ್ ಮೋಹನ್ (Alok Mohan) ಆದೇಶ ಹೊರಡಿಸಿದ್ದರು. ಇದನ್ನೂ ಓದಿ: ಚೀನಿ ವೈರಸ್‌ಗೆ ಭಯಪಡಬೇಡಿ, ಸಾಮಾನ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಿ: ಕೇಂದ್ರ ಆರೋಗ್ಯ ಸಂಸ್ಥೆ
Advertisement
Advertisement
ಈ ಬೆನ್ನಲ್ಲೇ ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಎಫ್‌ಐಆರ್ ದಾಖಲಿಸಿಕೊಂಡಿದ್ದ ಮಧುಗಿರಿ ಪೊಲೀಸರು, ಡಿವೈಎಸ್‌ಪಿಯನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: 15 ಗಂಟೆಗಳ ಕಾಲ ತನಿಖೆ ಅಮಾನವೀಯ ನಡವಳಿಕೆ ಎಂದ ಸುಪ್ರೀಂ – ಇಡಿ ಕಾರ್ಯವೈಖರಿಗೆ ತರಾಟೆ