ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆದ ಪಾದಯಾತ್ರೆ (Mekedatu Padayatra) ವೇಳೆ ಕೊರೊನಾ ನಿಯಮ ಉಲ್ಲಂಘನೆ ಮತ್ತು ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Advertisement
ತಮ್ಮ ವಿರುದ್ಧ ದಾಖಲಾಗಿರುವ 8 ಪ್ರಕರಣಗಳನ್ನು ರದ್ದುಮಾಡುವಂತೆ ಪ್ರತ್ಯೇಕವಾಗಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿಗಳಿಗೆ ಸಂಬಂಧಿಸಿದಂತೆ ಕಚೇರಿ ಆಕ್ಷೇಪಣೆಗಳನ್ನ ಸರಿಪಡಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನ ಒಂದು ವಾರದ ಕಾಲ ಮುಂದೂಡಿದೆ. ಇದನ್ನೂ ಓದಿ: Karnataka Cabinet Expansion – ಪ್ರಮುಖ ಐದು ಖಾತೆಗಳಿಗೆ ಡಿಕೆ ಶಿವಕುಮಾರ್ ಪಟ್ಟು
Advertisement
Advertisement
ಮೇಕೆದಾಟು ಪಾದಯಾತ್ರೆ ವೇಳೆ ಕೊರೊನಾ ನಿಯಮ ಉಲ್ಲಂಘನೆ, ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿವಿಧ ಠಾಣೆಗಳಲ್ಲಿ 8 ಕೇಸ್ ದಾಖಲಾಗಿದ್ದವು. ತಮ್ಮ ವಿರುದ್ಧ ದಾಖಲಾದ ಪ್ರಕರಣಗಳನ್ನ ರದ್ದು ಮಾಡುವಂತೆ ಡಿಕೆಶಿ ಹೈಕೋರ್ಟ್ (Karnataka Highcourt) ಮೆಟ್ಟಿಲೇರಿದ್ದರು. ಇದನ್ನೂ ಓದಿ: ಜೂನ್ ಯಾಕೆ? ನಾಳೆಯೇ ನಮ್ಮ ಮನೆ ಹತ್ರ ಬಂದು ಮಲ್ಕೊಳ್ಳಲಿ: ಪ್ರತಾಪ್ ಆರೋಪಕ್ಕೆ ಡಿಕೆಶಿ ವ್ಯಂಗ್ಯ