ಚಿಕ್ಕೋಡಿ: ಲಕ್ಷ್ಮಣ್ ಸವದಿ (Laxman Savadi) ಕಾಂಗ್ರೆಸ್ (Congress) ತೊರೆದು ಬಿಜೆಪಿ (BJP) ಸೇರುತ್ತಾರೆ ಎನ್ನುವ ಚರ್ಚೆಯ ನಡುವೆ ಅವರ ಹುಟ್ಟುಹಬ್ಬದ ಬ್ಯಾನರ್‌ಗಳಲ್ಲಿ ಕಾಂಗ್ರೆಸ್ ಚಿಹ್ನೆ ಮಾಯವಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದೆ.
ಇತ್ತೀಚೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮರಳಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದಾದ ಬಳಿಕ ಸವದಿಯವರೂ ಸಹ ಬಿಜೆಪಿಗೆ ಮರಳುತ್ತಾರೆ ಎಂಬ ಚರ್ಚೆ ಶುರುವಾಗಿತ್ತು. ಇದೀಗ ಹುಟ್ಟುಹಬ್ಬದ ಬ್ಯಾನರ್ ಹೊಸ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ
ಪೆ.16 ರಂದು ಲಕ್ಷ್ಮಣ್ ಸವದಿ ಹುಟ್ಟುಹಬ್ಬದ ಹಿನ್ನಲೆ ಅಥಣಿಯಲ್ಲಿ ಸವದಿ ಆಪ್ತರು, ಮುಖಂಡರು ಹಾಗೂ ಸ್ಥಳೀಯ ಸಂಸ್ಥೆಯ ಸದಸ್ಯರಿಂದ ಪಟ್ಟಣದಲ್ಲಿ ಶುಭಾಶಯ ಕೋರಿ ನೂರಾರು ಫ್ಲೆಕ್ಸ್‌ಗಳನ್ನು ಹಾಕಿದ್ದಾರೆ. ಈ ಬ್ಯಾನರ್‌ಗಳಲ್ಲಿ ಒಂದರಲ್ಲೂ ಕಾಂಗ್ರೆಸ್ ಚಿಹ್ನೆ ಇಲ್ಲದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ನಾನು ಬಿಜೆಪಿಗೆ ಹೋಗುವುದಿಲ್ಲ ಎಂದು ಸವದಿ ಹೇಳಿದ್ದರೂ ತೆರೆಮರೆಯಲ್ಲಿ ಬಿಜೆಪಿ ಮರಳಿ ಕರೆ ತರುವ ಕೆಲಸ ನಡೆಯುತ್ತಿದೆ. ಇದನ್ನೂ ಓದಿ: ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು: ಸಿದ್ದರಾಮಯ್ಯಗೆ 10 ಸಾವಿರ ರೂ. ದಂಡ