ಬಾಲಿವುಡ್‌ನ ‘ಆಶಿಕಿ 2’ (Ashiqui 2) ಹೀರೋ ಆದಿತ್ಯ ರಾಯ್ ಕಪೂರ್ (Aditya Roy Kapoor) ಅವರು ಸಿನಿಮಾಗಿಂತ ಹೆಚ್ಚುಚ್ಚು ಖಾಸಗಿ ವಿಚಾರವಾಗಿಯೇ ಸುದ್ದಿಯಾಗುತ್ತಿದ್ದಾರೆ. ಅನನ್ಯಾ ಪಾಂಡೆ (Ananya Panday) ಜೊತೆ ಆದಿತ್ಯ ಡೇಟ್ ಮಾಡ್ತಿದ್ದಾರೆ ಎನ್ನಲಾಗಿತ್ತು. ಇಬ್ಬರೂ ಈ ಬಗ್ಗೆ ತುಟಿಕ್ ಪಿಟಿಕ್ ಎನ್ನುತ್ತಿರಲಿಲ್ಲ. ಈಗ ಇಬ್ಬರೂ ಜೊತೆಯಿರುವ ಫೋಟೋ ಲೀಕ್ ಆಗಿದೆ. ಸೋಷಿಯಲ್ ಮೀಡಿಯಾ ತುಂಬೆಲ್ಲಾ ಈ ಜೋಡಿಯ ಫೋಟೋ ಸದ್ದು ಮಾಡುತ್ತಿದೆ.
ಆದಿತ್ಯ ಕಪೂರ್ ಮತ್ತು ಲೈಗರ್ (Liger) ನಟಿ ಅನನ್ಯಾ ಪಾಂಡೆ ಇಬ್ಬರು ಸ್ಟಾರ್ ಕಿಡ್ಸ್ ಆಗಿದ್ದರು ಕೂಡ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ‘ಆಶಿಕಿ 2’ ಚಿತ್ರದಲ್ಲಿ ಗಮನ ಸೆಳೆದ ಆದಿತ್ಯ, ತಮ್ಮ ವೃತ್ತಿ ಜೀವನದಲ್ಲಿ ಒಂದೊಳ್ಳೆ ಬ್ರೇಕ್‌ಗಾಗಿ ಕಾಯ್ತಿದ್ದಾರೆ. ಹೀಗಿರುವಾಗ ಲೈಗರ್ ನಟಿ ಜೊತೆ ಆದಿತ್ಯ ಹೆಸರು ಕೇಳಿ ಬರುತ್ತಿದೆ. ಸಾಕಷ್ಟು ವರ್ಷಗಳಿಂದ ಇಬ್ಬರು ಡೇಟಿಂಗ್ ಮಾಡ್ತಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್
ಸಾಕಷ್ಟು ವರ್ಷಗಳಿಂದ ಆದಿತ್ಯ- ಅನನ್ಯಾ ಪಾಂಡೆ ಇಬ್ಬರು ಪರಿಚಿತರು. ಹಾಗಾಗಿ ಡೇಟಿಂಗ್ ಸುದ್ದಿಗೆ ಈ ಜೋಡಿಯ ನಯಾ ಪುಷ್ಟಿ ನೀಡುತ್ತಿದೆ. ಇಬ್ಬರೂ ಅವರು ಪ್ರತ್ಯೇಕವಾಗಿ ವಿಮಾನ ಏರಿ ವಿದೇಶಕ್ಕೆ ತೆರಳಿದ್ದಾರೆ. ಆದರೆ ಅವರಿಬ್ಬರೂ ಹೋಗಿರುವುದು ಒಂದೇ ಲೊಕೇಷನ್‌ಗೆ. ಸ್ಪೇನ್‌ನಲ್ಲಿ ಸಂಗೀತ ಕಾರ್ಯಕ್ರಮವೊಂದಕ್ಕೆ ಅವರು ಹಾಜರಿ ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸ್ಟೋರಿಗಳನ್ನು ಅಪ್‌ಲೋಡ್ ಮಾಡಿಕೊಂಡಿದ್ದಾರೆ. ಇಬ್ಬರ ಸ್ಟೋರಿಯಲ್ಲೂ ಸಾಮ್ಯತೆ ಇರುವುದರಿಂದ ಅಭಿಮಾನಿಗಳಿಗೆ ಎಲ್ಲವೂ ಸ್ಪಷ್ಟವಾಗಿದೆ. ಇಷ್ಟೇ ಅಲ್ಲ, ಅವರಿಬ್ಬರ ನಡುವಿನ ಆಪ್ತತೆಗೆ ಸಾಕ್ಷಿ ಒದಗಿಸುವಂತಹ ಇನ್ನೊಂದು ಫೋಟೋ ಕೂಡ ವೈರಲ್ ಆಗಿದೆ.
View this post on Instagram
ಅನನ್ಯಾರನ್ನು ಆದಿತ್ಯ ಅವರು ಹಿಂಬದಿಯಿಂದ ತಬ್ಬಿಕೊಂಡು ನಿಂತಿರುವ ಫೋಟೋ ಸದ್ದು ಮಾಡುತ್ತಿದೆ. ಇದನ್ನು ನೋಡಿ ಅಭಿಮಾನಿಗಳು ಹುಬ್ಬೇರಿಸಿದ್ದಾರೆ. ಇಷ್ಟು ದಿನಗಳ ಕಾಲ ಈ ಜೋಡಿ ಹಕ್ಕಿಗಳು ತಮ್ಮ ಪ್ರೀತಿ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಆದರೆ ಈಗ ಎಲ್ಲವೂ ಬಟಾಬಯಲಾಗಿದೆ. ಕದ್ದು-ಮುಚ್ಚಿ ಡೇಟಿಂಗ್ ಮಾಡುತ್ತಿರುವ ರಹಸ್ಯ ರಿವೀಲ್ ಆಗಿದೆ. ಫ್ಯಾನ್ಸ್ ಬಗೆ ಬಗೆಯ ರೀತಿಯಲ್ಲಿ ಕಾಮೆಂಟ್ ಮಾಡ್ತಿದ್ದಾರೆ.
ಇನ್ನೂ ಕೆಲವು ತಿಂಗಳುಗಳ ಹಿಂದೆ ಇವೆಂಟ್‌ವೊಂದರಲ್ಲಿ ಇಬ್ಬರು ಜೊತೆಯಾಗಿ ರ‍್ಯಾಂಪ್ ವಾಕ್ ಮಾಡಿದ್ದು. ಜೋಡಿಯಾಗಿ ಹಲವು ಇವೆಂಟ್‌ನಲ್ಲಿ ಭಾಗಿಯಾಗುತ್ತಿದ್ದರು. ಅಂದಿನ ಆದಿತ್ಯ- ಅನನ್ಯಾ ಅವರ ಫೋಟೋಶೂಟ್ ಸಖತ್ ವೈರಲ್ ಆಗಿತ್ತು. ಬಾಲಿವುಡ್‌ನಲ್ಲೂ ಸ್ಟಾರ್ ನಟ-ನಟಿಯರ ಮದುವೆ ಸೀಸನ್ ಶುರುವಾಗಿರೋದ್ರಿಂದ ಈ ಜೋಡಿ ಕೂಡ ಮದುವೆ ಬಗ್ಗೆ ಸಿಹಿಸುದ್ದಿ ಕೊಡ್ತಾರಾ ಕಾಯಬೇಕಿದೆ.