ಕಾರವಾರ: ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಡೆಯುತ್ತಿದ್ದ, ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಬಹಿರಂಗ ವೇದಿಕೆಯಲ್ಲೇ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್ ಎದುರು ಶಾಸಕಿ ರೂಪಾಲಿ ನಾಯ್ಕ್ ಅಸಮಧಾನ ವ್ಯಕ್ತಪಡಿಸಿದ್ದಾರೆ.
2018ರಿಂದ ಕಾರವಾರ ಕ್ಷೇತ್ರಕ್ಕೆ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ಪ್ರವಾಸೋದ್ಯಮ ಇಲಾಖೆಯವರು ನನ್ನ ಕ್ಷೇತ್ರದಲ್ಲಿ ಏನೇ ಅಭಿವೃದ್ಧಿ ಕಾರ್ಯ ನಡೆಸಿದರೂ ಅದರ ಯಾವುದೇ ಮಾಹಿತಿ ನೀಡುವುದಿಲ್ಲ. ನಾನೊಬ್ಬಳು ಕ್ಷೇತ್ರದ ಶಾಸಕಿ ಎಂಬುದನ್ನು ಮರೆತು ಆಧಿಕಾರಿಗಳು ತಮ್ಮ ಇಚ್ಛೆಗೆ ತಾವು ನಡೆದುಕೊಳ್ಳುತ್ತಿದ್ದಾರೆ ಎಂದು ಗರಂ ಆದರು. ಇದನ್ನೂ ಓದಿ: ನಾನು 35 ಅಂಕದ ಕೆಟಗೆರಿಯವರು ಅದಕ್ಕೆ ಕೈಗಾರಿಕಾ ಸಚಿವನಾದೆ: ಮುರುಗೇಶ್ ನಿರಾಣಿ
ನನ್ನ ಕ್ಷೇತ್ರದಲ್ಲಿ ಕೋಟಿಗಟ್ಟಲೇ ಹಣ ಹಾಕಿ ನಿರ್ಮಿಸಿದ ಗಾರ್ಡನ್‍ಗಳು ಸೇರಿದಂತೆ ಇತರೆ ಕಾಮಗಾರಿಗಳ ಕಾರ್ಯ ನಿಂತುಹೋಗಿದೆ. ಇದಕ್ಕೆಲ್ಲಾ ಅಧಿಕಾರಿಗಳು ಕಾರಣ ಎಂದು ಕಿಡಿಕಾರಿದರು.