ನವದೆಹಲಿ: ಅಮೆರಿಕನ್ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಕುಸಿತ ಕಾಣುತ್ತಿರುವ ಕಳವಳದ ನಡುವೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರೂ. ಮೌಲ್ಯ ಕುಸಿಯುತ್ತಿಲ್ಲ. ಅದು ತನ್ನ ಸ್ವಾಭಾವಿಕ ಹಾದಿಯನ್ನು ಕಂಡುಕೊಳ್ಳುತ್ತಿದೆ ಎಂದು ಹೇಳಿಕೆ ನೀಡಿದರು.
ರಾಜ್ಯಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ರೂ. ಮೌಲ್ಯ ಕುಸಿತದ ಬಗ್ಗೆ ಮಾತನಾಡಿದ ಸೀತಾರಾಮನ್, ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಸ್ಥಳೀಯ ಕರೆನ್ಸಿ ಬಗ್ಗೆ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಒಂದು ವೇಳೆ ಅಸ್ಥಿರತೆ ಕಂಡುಬಂದಲ್ಲಿ ಮಾತ್ರವೇ ಮಧ್ಯಪ್ರವೇಶಿಸುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ದೇಶದಲ್ಲಿ ʻಪ.ಬಂಗಾಳ ಪಡಿತರ ಮಾದರಿʼ ಜಾರಿಗೊಳಿಸಿ – ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಧಾನಿ ಮೋದಿ ಸಹೋದರ ಪ್ರತಿಭಟನೆ
Advertisement
Advertisement
ಆರ್‌ಬಿಐ ಮಧ್ಯಸ್ಥಿಕೆಯಿಂದ ರೂ. ಮೌಲ್ಯದ ಏರಿಕೆ ಅಥವಾ ಇಳಿಕೆಯನ್ನು ನಿರ್ಧರಿಸಲು ಸಾಧ್ಯವಿಲ್ಲ. ಅದು ಕೇವಲ ಅಸ್ಥಿರತೆಯನ್ನು ತಪ್ಪಿಸಲು ಹಾಗೂ ಅದರ ಹಾದಿಯನ್ನು ಕಂಡುಕೊಳ್ಳಲು ಅವಕಾಶ ನೀಡುತ್ತದೆ ಎಂದು ಹೇಳಿದರು.
Advertisement
ಭಾರತವೂ ಕೂಡಾ ಇತರ ಹಲವು ದೇಶಗಳಂತೆ. ಅದು ತನ್ನ ಕರೆನ್ಸಿಯ ಮೌಲ್ಯವನ್ನು ಇತರ ದೇಶಗಳೊಂದಿಗೆ ತನಗೆ ಬೇಕಿದ್ದಂತೆ ಏರಿಕೆ ಅಥವಾ ಇಳಿಕೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಾವು ರೂ. ಮೌಲ್ಯವನ್ನು ಬಲಪಡಿಸಲು ಸಾಧ್ಯವಿರುವ ಮಾರ್ಗಗಳನ್ನು ಕಂಡುಕೊಂಡು ಆರ್‌ಬಿಐ ಹಾಗೂ ಸಚಿವಾಲಯಗಳೊಂದಿಗೆ ತಕ್ಕಮಟ್ಟಿನ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: NIA ಕಚೇರಿ ವ್ಯಾಪ್ತಿ ಬೆಂಗಳೂರಿಗೆ ವಿಸ್ತರಿಸಲು ಶೋಭಾ ಕರಂದ್ಲಾಜೆ ಮನವಿ
Advertisement
ಭಾರತೀಯ ರೂ. ತನ್ನ ಇತರ ದೇಶಗಳಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ವಾಸ್ತವವಾಗಿ ಭಾರತೀಯ ರೂಪಯಿಯನ್ನು ಇತರ ಕರೆನ್ಸಿಗಳಿಗೆ ಹೋಲಿಸಿದರೆ ಅದರ ಮೌಲ್ಯ ಹೆಚ್ಚಾಗಿರುವುದು ಕಂಡುಬರುತ್ತದೆ ಎಂದು ಸ್ಪಷ್ಟಪಡಿಸಿದರು.