LatestMain PostNational

ಡಾಲರ್ ಎದುರು ರೂಪಾಯಿ ಮೌಲ್ಯ 81.90ಕ್ಕೆ ಕುಸಿತ

ನವದೆಹಲಿ: ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದಾಗಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಅಮೆರಿಕ ಡಾಲರ್ ಎದುರು 81.90 ರೂ.ಗೆ ಇಳಿದಿದ್ದು, ಸಾರ್ವಕಾಲಿನ ಕುಸಿತ ದಾಖಲಿಸಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಮೊದಲ ಬಾರಿಗೆ 82ಕ್ಕಿಂತ ಕೆಳಗಿಳಿದಿದೆ. ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕಿನ ಕಠಿಣ ಹೇಳಿಕೆಗಳು ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಡಾಲರ್ ಮೌಲ್ಯವರ್ಧನೆಗೊಂಡ ಪರಿಣಾಮ ರೂಪಾಯಿ ಸೇರಿದಂತೆ ಇತರ ರಾಷ್ಟ್ರಗಳ ಕರೆನ್ಸಿಗಳು ತೀವ್ರ ಹೊಡೆತ ಅನುಭವಿಸಿವೆ. ಅಮೆರಿಕದ ಟ್ರೆಷರ್ ಯೀಲ್ಡ್ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿರುವ ಜೊತೆಗೆ ಆಮದುದಾರರಿಂದ ಡಾಲರ್‌ಗೆ ಬೇಡಿಕೆ ಹೆಚ್ಚಳವಾಗಿರುವುದು ಕೂಡ ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ.

ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ಡಾಲರ್ ಎದುರು ಸತತ ಮೂರನೇ ಬಾರಿ ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಇದೇ ರೀತಿ 2024ರವರೆಗೂ ಯುಎಸ್ ಡಾಲರ್ ಏರಿಕೆ ಕಾಣಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನೇಮಕ

RBI

ಈ ಹಿನ್ನೆಲೆಯಲ್ಲಿ ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆ ಆರಂಭವಾಗಿದ್ದು, ಈ ಬಾರಿ ಕೂಡ ರೆಪೋ ದರ ಹೆಚ್ಚಳ ಮಾಡುವ ಸಾಧ್ಯತೆ ನಿಚ್ಚಳವಾಗಿದೆ. ಮೇನಿಂದ ಈ ತನಕ ಆರ್‌ಬಿಐ ರೆಪೋ ದರವನ್ನು 140 ಮೂಲಾಂಕಗಳಷ್ಟು ಏರಿಕೆ ಮಾಡಿದ್ದು, ಪ್ರಸ್ತುತ ಶೇ.5.4ಕ್ಕೆ ತಲುಪಿದೆ. ರೆಪೋ ದರ ಏರಿಕೆಯಿಂದ ಗೃಹ ಸಾಲ ಹಾಗೂ ವಾಹನ ಸಾಲ ಸೇರಿದಂತೆ ವಿವಿಧ ಸಾಲಗಳ ಮೇಲಿನ ಬಡ್ಡಿದರ ಇನ್ನೊಮ್ಮೆ ಹೆಚ್ಚಳವಾಗಲಿದೆ. ಈಗಾಗಲೇ ಬಡ್ಡಿದರ ಹೆಚ್ಚಳದಿಂದ ಶಾಕ್ ಆಗಿರುವ ಜನಸಾಮಾನ್ಯರಿಗೆ ಅದರ ಬಿಸಿ ಇನ್ನಷ್ಟು ತಟ್ಟಲಿದೆ. ಇದನ್ನೂ ಓದಿ: ತಾಕತ್ ಇದ್ರೆ ಕಾಂಗ್ರೆಸ್‌ನಿಂದ ಬರುವ ಶಾಸಕರನ್ನ ತಡೆಯಿರಿ: ಸವದಿ ಸವಾಲು

Live Tv

Leave a Reply

Your email address will not be published. Required fields are marked *

Back to top button