ಹೈದರಾಬಾದ್: ರಿಯಾದ್‌ನಿಂದ (Riyadh) ಹೈದರಾಬಾದ್‌ಗೆ (Hyderabad) ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಬಂಧಿಸಿ ಸುಮಾರು 67 ಲಕ್ಷ ರೂ. ಮೌಲ್ಯದ 14 ಚಿನ್ನದ ಬಾರ್‌ಗಳನ್ನು (Gold Bar) ವಶಪಡಿಸಿಕೊಂಡ ಘಟನೆ ತೆಲಂಗಾಣದಲ್ಲಿ (Telangana) ನಡೆದಿದೆ.
ಹೈದರಾಬಾದ್‌ನ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಿಯಾದ್‌ನಿಂದ ಬಹ್ರೇನ್ ಮೂಲಕ ಹೈದರಾಬಾದ್‌ಗೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ. ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಹೈದರಬಾದ್ ಕಸ್ಟಮ್ಸ್ ಮತ್ತು ಆರ್‌ಜಿಐನ ಕಸ್ಟಮ್ಸ್ ಏರ್ ಇಂಟಲಿಜೆನ್ಸ್ ತಂಡವು ವಿಮಾನದಲ್ಲಿ ಬಂದಿಳಿದ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪತಿಯನ್ನು ಕೊಂದು ಸ್ನೇಹಿತರಿಗೆ ಪಾರ್ಟಿ ಕೊಟ್ಟಿದ್ದ ಕಿಲ್ಲರ್ ಲೇಡಿ
Advertisement
ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ತಡೆದು ಅವರ ಬ್ಯಾಗ್‌ಗಳನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ಆರೋಪಿ ತಂದಿದ್ದ ಲೈಟ್‌ನ ಬ್ಯಾಟರಿಯೊಳಗೆ 24 ಕ್ಯಾರೆಟ್‌ನ 14 ಚಿನ್ನದ ಬಾರ್‌ಗಳು ಪತ್ತೆಯಾಗಿದೆ. ಚಿನ್ನದ ಬಾರ್‌ಗಳನ್ನು ಕಸ್ಟಮ್ಸ್ ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಬಾರ್‌ಗಳು ಸುಮಾರು 1287.6 ಗ್ರಾಂ ತೂಕ ಹೊಂದಿದ್ದು, ಅದರ ಮೌಲ್ಯ 67,96,133 ರೂ.ಗಳಾಗಿವೆ. ಇದನ್ನೂ ಓದಿ: 12 ಸಾವಿರ ಕೋಟಿ ಮೌಲ್ಯದ 2.5 ಟನ್ ಡ್ರಗ್ಸ್ ಜಪ್ತಿ – ಪಾಕ್ ಆರೋಪಿಯ ಬಂಧನ
Advertisement
Advertisement
ಭಾರತೀಯ ಕಸ್ಟಮ್ಸ್ ಆ್ಯಕ್ಟ್ (Indian Customs Act) 1962ರ ಅಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೆಲಸದ ನೆಪದಲ್ಲಿ ಕರೆದೊಯ್ದು ಕಾರಿನಲ್ಲಿ ಕಿರುಕುಳ- ಬೈಕಲ್ಲಿ ಬಂದವ್ರಿಂದ ಮಹಿಳೆ ರಕ್ಷಣೆ