ನವದೆಹಲಿ: ಉಕ್ರೇನ್‍ನಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
मजबूर छात्रों के साथ ऐसा शर्मनाक बर्ताव पूरे देश का अपमान है। #OperationGanga के इस कड़वे सच ने मोदी सरकार का असली चेहरा दिखाया है। pic.twitter.com/kaEzhtdTko
— Rahul Gandhi (@RahulGandhi) March 5, 2022
Advertisement
ಟ್ವೀಟ್‍ನಲ್ಲಿ ಏನಿದೆ: ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ. ಅಸಹಾಯಕ ವಿದ್ಯಾರ್ಥಿಗಳ ಜೊತೆಗೆ ಇಂತಹ ನಾಚಿಕೆಗೇಡಿನ ವರ್ತನೆ ಇಡೀ ದೇಶಕ್ಕೆ ಮಾಡಿದ ಅವಮಾನ. ಆಪರೇಷನ್ ಗಂಗಾದ ಈ ಕಹಿ ಸತ್ಯವು ಮೋದಿ ಸರ್ಕಾರದ ನೈಜ ಮುಖವನ್ನು ತೆರೆದಿಟ್ಟಿದೆ ಎಂದೂ ರಾಹುಲ್ ಟೀಕಿಸಿದ್ದಾರೆ. ಇದನ್ನೂ ಓದಿ: ನಾನು ಕೀವ್‍ನಲ್ಲಿದ್ದೇನೆ, ತಪ್ಪಿಸಿಕೊಂಡು ಹೋಗಿಲ್ಲ: ಉಕ್ರೇನ್ ಅಧ್ಯಕ್ಷ
Advertisement
Advertisement
ಆಪರೇಷನ್ ಗಂಗಾ: ರಷ್ಯಾ ಆಕ್ರಮಣದ ಹಿನ್ನೆಲೆಯಲ್ಲಿ ಉಕ್ರೇನ್ ವಾಯುಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಆ ಹಿನ್ನೆಲೆಯಲ್ಲಿ ಫೆಬ್ರುವರಿ 24ರಿಂದ ಉಕ್ರೇನ್‍ನ ನೆರೆ ದೇಶಗಳಾದ ನಿಯಾ, ಹಂಗೆರಿ, ಸ್ಲೋವಾಕಿಯಾ ಮತ್ತು ಪೋಲೆಂಡ್‍ನಿಂದ ಭಾರತೀಯರನ್ನು ತೆರವುಗೊಳಿಸಲಾಗುತ್ತಿದೆ. ಈ ಕಾರ್ಯಾಚರಣೆಗೆ ಆಪರೇಷನ್ ಗಂಗಾ ಎಂದು ಹೆಸರಿಡಲಾಗಿದೆ.