ಮಾಸ್ಕೋ: ರಷ್ಯಾದ ಅಸ್ತಿತ್ವಕ್ಕೆ ಬೆದರಿಕೆಯಿದ್ದರೆ ಮಾತ್ರ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುತ್ತದೆ ಎಂದು ರಷ್ಯಾದ ವಕ್ತಾರ ಡಿಮಿಟ್ರಿ ಪೆಸ್ಕೋವ್ ಸೋಮವಾರ ಸಂದರ್ಶನದಲ್ಲಿ ತಿಳಿಸಿದ್ದಾರೆ.
ನಾವು ಭದ್ರತಾ ಪರಿಕಲ್ಪನೆಯನ್ನು ಹೊಂದಿದ್ದೇವೆ. ರಾಜ್ಯದ ಅಸ್ತಿತ್ವಕ್ಕೆ ಬೆದರಿಕೆ ಉಂಟಾದಾಗ ಮಾತ್ರ ಅದನ್ನು ತೊಡೆದುಹಾಕಲು ನಾವು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವ ಸಾಧ್ಯತೆ ಇದೆ ಹಾಗೂ ಖಂಡಿತವಾಗಿಯೂ ಬಳಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾರವಾರ ಬಂದರು ವಿಸ್ತರಣೆ ಕಾಮಗಾರಿ ಮುಂದುವರಿಸಬೇಡಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ
ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೇಶದ ಕಾರ್ಯತಂತ್ರದ ಪರಮಾಣು ಪಡೆಗೆ ಆಕ್ರಮಣಕ್ಕೆ ತಯಾರಾಗಿರಲು ತಿಳಿಸಿದ್ದರು. ಈ ಆದೇಶ ಜಾಗತಿಕವಾಗಿಯೇ ಎಚ್ಚರಿಕೆಯ ಕರೆಗಂಟೆಯಾಗಿದೆ. ಇದನ್ನೂ ಓದಿ: ಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಗಾಗಿ ಪರಮಾಣು ಶಸ್ತ್ರಾಸ್ತ್ರ ಬಳಕೆ ಕಾರಣವಾಗುವುದಿಲ್ಲ. ಬದಲಾಗಿ ರಷ್ಯಾಗೆ ಬೆದರಿಕೆಯಿದ್ದಲ್ಲಿ ಮಾತ್ರವೇ ಪರಮಾಣು ಶಸ್ತ್ರಾಸ್ತ್ರ ಬಳಸುವುಗಿ ಡಿಮಿಟ್ರಿ ಪೆಸ್ಕೋವ್ ಸ್ಪಷ್ಟಪಡಿಸಿದ್ದಾರೆ.