ವಾಷಿಂಗ್ಟನ್: ಉಕ್ರೇನ್ ವಿರುದ್ಧ ದಾಳಿ ನಡೆಸುತ್ತಿರುವ ರಷ್ಯಾ ತನ್ನ ಯುದ್ಧವನ್ನು ಮುಂದುವರಿಸಲು ಡ್ರೋನ್‍ಗಳು ಸೇರಿದಂತೆ ಮಿಲಿಟರಿ ನೆರವು ನೀಡುವಂತೆ ರಷ್ಯಾ ಚೀನಾವನ್ನು ಕೇಳಿದೆ ಎಂದು ಅಮೆರಿಕದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ್ದರಿಂದ ಅಮೆರಿಕ ಮತ್ತು ಯುರೋಪಿಯನ್ ಮಿತ್ರರಾಷ್ಟ್ರಗಳು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ರಷ್ಯಾದ ಉನ್ನತ ಶ್ರೇಣಿಯ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ರಷ್ಯಾದ ಹಲವಾರು ಪ್ರಮುಖ ಬ್ಯಾಂಕ್‍ಗಳ ಮೇಲೆ ನಿರ್ಬಂಧ ಹೇರಿತು. ಜೊತೆಗೆ ರಷ್ಯಾವನ್ನು SWIFT ಹಣಕಾಸು ವ್ಯವಸ್ಥೆಯಿಂದ ಹೊರಹಾಕಿದೆ.
Advertisement
Advertisement
ಸದ್ಯ ವಾಷಿಂಗ್ಟನ್‍ನಲ್ಲಿರುವ ಚೀನಾ ರಾಯಭಾರ ಕಚೇರಿಯ ವಕ್ತಾರ ಲಿಯು ಪೆಂಗ್ಯು ರಷ್ಯಾಕ್ಕೆ ಸಹಾಯ ಮಾಡಲು ಚೀನಾ ಸಿದ್ಧವಾಗಿರುವ ಬಗ್ಗೆ ಯಾವುದೇ ಮಾಹಿತಿಗಳು ತನಗೆ ತಿಳಿದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಜಮ್ಮು, ಕಾಶ್ಮೀರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Advertisement
ನನಗೆ ಈ ಬಗ್ಗೆ ಯಾವುದು ಸಹ ತಿಳಿದಿಲ್ಲ. ಉಕ್ರೇನ್ ಪರಿಸ್ಥಿತಿ ನಿಜಕ್ಕೂ ಅಸ್ತವ್ಯಸ್ತವಾಗಿದೆ. ಚೀನಾ ಉಕ್ರೇನ್‍ಗೆ ಮಾನವೀಯ ನೆರವು ನೀಡುತ್ತಿದೆ ಅದನ್ನು ಮುಂದುವರಿಸುತ್ತದೆ. ಈಗ ಹೆಚ್ಚಿನ ಆದ್ಯತೆ ಉದ್ವಿಗ್ನ ಪರಿಸ್ಥಿತಿಯನ್ನು ಉಲ್ಬಣಗೊಳಿಸುವುದಾಗಿದೆ. ಚೀನಾವು ಸಂಯಮದಿಂದ ಮಾನವೀಯತೆಯನ್ನು ತೋರಿಸುವಂತೆ ಕರೆ ನೀಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಭಗವಂತ್ ಮಾನ್