ವಾಷಿಂಗ್ಟನ್: ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ದಾಳಿಯನ್ನು ಮುಂದುವರಿಸಿದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧ ಸಂಘರ್ಷ ವಿಶ್ವದಲ್ಲೇ ಭಾರಿ ಆತಂಕವನ್ನುಂಟು ಮಾಡಿದೆ. ಇದರ ನಡವಲ್ಲೇ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಣ ಸಂಪಾದಿಸುವ ರಷ್ಯಾದ ಮಾಧ್ಯಮಗಳಿಗೆ ಫೇಸ್‍ಬುಕ್ ನಿರ್ಬಂಧ ವಿಧಿಸಿದೆ.
ನಿನ್ನೆ ರಷ್ಯಾದ ನಾಲ್ಕು ಸರ್ಕಾರಿ ಸ್ವಾಮ್ಯದ ಮಾಧ್ಯಮ ಸಂಸ್ಥೆಗಳು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ ವಿಚಾರದ ಸ್ವತಂತ್ರ ಫ್ಯಾಕ್ಟ್ ಚೆಕ್ ಮತ್ತು ಲೇಬಲ್ ಹಾಕುವುದನ್ನು ನಿಲ್ಲಿಸುವಂತೆ ರಷ್ಯಾದ ಅಧಿಕಾರಿಗಳು ನಮಗೆ ಆದೇಶಿಸಿದರು. ಅದನ್ನು ನಾವು ನಿರಾಕರಿಸಿದ್ದೇವೆ ಎಂದು ಫೇಸ್‍ಬುಕ್‍ನ ಮಾತೃ ಸಂಸ್ಥೆ ಮೆಟಾದ ನಿಕ್ ಕ್ಲೆಗ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Advertisement
Advertisement
ಟ್ವೀಟ್‍ನಲ್ಲಿ ಏನಿದೆ?: ನಾವು ಈಗ ರಷ್ಯಾದ ಮಾಧ್ಯಮಗಳು ವಿಶ್ವದ ಯಾವುದೇ ಭಾಗದಲ್ಲಿ ನಮ್ಮ ಮಾಧ್ಯಮಗಳ ಮೂಲಕ ಜಾಹೀರಾತುಗಳನ್ನು ಪ್ರಕಟಿಸುವುದು ಅಥವಾ ಹಣ ಗಳಿಸುವುದನ್ನು ನಿಷೇಧಿಸುತ್ತಿದ್ದೇವೆ. ಫೇಸ್‍ಬುಕ್ ರಷ್ಯಾದ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳಿಗೆ ಲೇಬಲ್ ಹಾಕುವುದನ್ನು ಮುಂದುವರಿಸುತ್ತದೆ ಎಂದು ಫೇಸ್‍ಬುಕ್‍ನ ಭದ್ರತಾ ನೀತಿ ವಿಭಾಗ ಮುಖ್ಯಸ್ಥ ನಥಾನಿಯಲ್ ಗ್ಲೀಚರ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್ ಹಿಡಿದ ದಂಪತಿ
Advertisement
Advertisement
ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ನೆಲೆಗಟ್ಟಿನಲ್ಲಿ ಸಾಮಾಜಿಕ ಮಾಧ್ಯಮ ನೆಟ್‍ವರ್ಕ್‍ಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಕೆಲವೊಮ್ಮೆ ತಪ್ಪುದಾರಿಗೆಳೆಯುವ ಮಾಹಿತಿ ಕೂಡ ಕಂಡುಬರುತ್ತಿದೆ. ದಶಕಗಳಲ್ಲಿ ತಲೆದೋರಿರುವ ಯುರೋಪಿನ ಅತಿದೊಡ್ಡ ಭೌಗೋಳಿಕ ರಾಜಕೀಯ ಬಿಕ್ಕಟ್ಟನ್ನು ಗುರುತಿಸುವತ್ತ ತ್ವರಿತವಾಗಿ ಬೆಳವಣಿಗೆ ಕಾಣುತ್ತಿರುವ ಸಂಘರ್ಷದ ನೈಜ-ಸಮಯದ ಮೇಲ್ವಿಚಾರಣೆ ಕೂಡ ಮಾಡುತ್ತಿವೆ. ಇದನ್ನೂ ಓದಿ: ಉಕ್ರೇನ್ ಬಿಕ್ಕಟ್ಟು – ಬೆಂಗಳೂರು ವಿದ್ಯಾರ್ಥಿನಿಯ ವೀಡಿಯೋ ಶೇರ್ ಮಾಡಿ ಕೇಂದ್ರಕ್ಕೆ ರಾಗಾ ಮನವಿ
ರಷ್ಯಾದ ನಾಗರಿಕರ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿ, ಫೇಸ್‍ಬುಕ್ ಬಳಕೆಯನ್ನು ಸೀಮಿತಗೊಳಿಸಲಾಗುತ್ತಿದೆ. ಉಕ್ರೇನ್‍ನಲ್ಲಿ ಹೆಚ್ಚುತ್ತಿರುವ ಮಿಲಿಟರಿ ಸಂಘರ್ಷಕ್ಕೆ ಪ್ರತಿಕ್ರಿಯೆಯಾಗಿ ಪರಿಸ್ಥಿತಿಯನ್ನು ಅವಲೋಕಿಸಲು ಫೇಸ್‍ಬುಕ್ ವಿಶೇಷ ಕಾರ್ಯಾಚರಣೆ ಕೇಂದ್ರವನ್ನು ಸ್ಥಾಪಿಸಿದೆ ಎಂದು ಗ್ಲೀಚರ್ ಹೇಳಿದ್ದಾರೆ. ಉಕ್ರೇನ್‍ನಲ್ಲಿ ಬೆಳಗಾವಿ ಯೋಧನ ಪುತ್ರಿ – ಮಗಳನ್ನು ರಕ್ಷಿಸುವಂತೆ ಪ್ರಧಾನಿ ಕೋರಿದ ಸೈನಿಕ
ಉಕ್ರೇನ್ ರಾಜಧಾನಿ ಕಿವ್‍ನಲ್ಲಿ ಇಂಟರ್‌ನೆಟ್ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ಮೂರನೇ ದಿನವಾಗಿದೆ. ಇದು ಯುದ್ಧದಿಂದಾಗ ಪರಿಣಾಮವೋ, ಸೈಬರ್ ಸಮಸ್ಯೆಯೋ, ಬೇಕಂತಲೇ ಆಗಿದ್ದೋ ಎಂಬುದು ಇನ್ನೂ ಗೊತ್ತಾಗಿಲ್ಲ.
1/ We are now prohibiting Russian state media from running ads or monetizing on our platform anywhere in the world. We also continue to apply labels to additional Russian state media. These changes have already begun rolling out and will continue into the weekend.
— Nathaniel Gleicher (@ngleicher) February 26, 2022