ಬೆಳಗಾವಿ: ಉಕ್ರೇನ್‍ನ ಕಾರ್ಕಿವ್ ನ್ಯಾಷನಲ್ ಮೆಡಿಕಲ್ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಗಡಿ ಜಿಲ್ಲೆ ಬೆಳಗಾವಿಯ ಏಳು ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದು, ತಾವು ವಾಸವಿದ್ದ ಹಾಸ್ಟೆಲ್‍ನ ನೆಲಮಹಡಿ ಮತ್ತು ಬಂಕರ್‌ಗಳಲ್ಲಿ ರಕ್ಷಣೆ ಪಡೆದಿದ್ದಾರೆ.
Advertisement
ಬೆಳಗಾವಿ ಜಿಲ್ಲೆಯ ಪ್ರಿಯಾ ಚಬ್ಬಿ, ಪ್ರೀತಿ ಚಬ್ಬಿ, ಶ್ರೇಯಾ ಹೆರಕಲ್, ಅಮೋಘ ಚೌಗಲಾ, ಪ್ರಿಯಾ ನಿಡಗುಂದಿ, ರಕ್ಷಿತ್ ಗಣಿ, ಅಫ್ರೀನ್ ಮದರಸಾಬ್ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಮಗನನ್ನು ನೆನೆದು ಕಣ್ಣೀರಿಟ್ಟ ಕಾಂಗ್ರೆಸ್‍ನ ಮಾಜಿ ಜಿಲ್ಲಾಧ್ಯಕ್ಷ
Advertisement
Advertisement
ವಿದ್ಯಾರ್ಥಿಗಳ ಪೋಷಕರ ಜೊತೆಗೆ ಬೆಳಗಾವಿ ಜಿಲ್ಲಾಡಳಿತ ಸಂಪರ್ಕದಲ್ಲಿದೆ. ಸದ್ಯಕ್ಕೆ ಇಬ್ಬರು ವಿದ್ಯಾರ್ಥಿನಿಯರ ಪೋಷಕರ ಜೊತೆ ಬೆಳಗಾವಿ ಡಿಸಿ ಮಾತುಕತೆ ನಡೆಸಿದ್ದಾರೆ. ಉಳಿದ ವಿದ್ಯಾರ್ಥಿಗಳ ಬಗ್ಗೆಯೂ ಜಿಲ್ಲಾಡಳಿತ ಮಾಹಿತಿ ಕಲೆ ಹಾಕುತ್ತಿದೆ. ನೆಲಮಹಡಿ, ಬಂಕರ್‍ಗಳಲ್ಲೇ ವಿದ್ಯಾರ್ಥಿಗಳು ಮೊಬೈಲ್ ಚಾರ್ಜ್ ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳ ಸ್ಥಿತಿ ಕಂಡು ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ರಾಜ್ಯ ಸರ್ಕಾರದಿಂದ ವೆಬ್ ಪೋರ್ಟಲ್ ಪ್ರಾರಂಭ
Advertisement
ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಸಾರುತ್ತಿದ್ದಂತೆ ಭಾರತದಿಂದ ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್‍ಗೆ ತೆರಳಿದ್ದ ಹಲವು ವಿದ್ಯಾರ್ಥಿಗಳು ಭಾರತಕ್ಕೆ ಹಿಂದಿರುಗಲಾಗದೆ ಸಮಸ್ಯೆ ಎದುರಿಸುತ್ತಿದ್ದಾರೆ. ಭಾರತ ಸರ್ಕಾರ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವುದಾಗಿ ಭರವಸೆ ನೀಡಿದೆ.