ಲಕ್ನೋ: ಉಕ್ರೇನ್‍ನಿಂದ ತನ್ನನ್ನು ರಕ್ಷಿಸುವಂತೆ ವೀಡಿಯೋ ಮಾಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯೊಬ್ಬರು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ವೈಶಾಲಿ ಯಾದವ್ ಸಂಕಷ್ಟಕ್ಕೆ ಸಿಲುಕಿರುವ ಗ್ರಾ.ಪಂ ಅಧ್ಯಕ್ಷೆ. ತೇರಾ ಪುರ್ಸಾಯಿಲಿ ಗ್ರಾಮ ಸಭಾ ಮುಖ್ಯಸ್ಥೆಯಾಗಿರುವ ಇವರು, ನಾನು ಉಕ್ರೇನಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದೇನೆ. ಹೀಗಾಗಿ ದಯವಿಟ್ಟು ನನ್ನನ್ನು ರಕ್ಷಿಸಿ ಎಂದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವೀಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ನಾನೇನು ಕಚ್ಚುವುದಿಲ್ಲ, ಮತ್ತೇಕೆ ನಿಮಗೆ ಭಯ? – ಪುಟೀನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ಅಧ್ಯಕ್ಷ
Advertisement
Advertisement
ಗ್ರಾ.ಪಂ ಮುಖ್ಯಸ್ಥೆಯಾಗಿರುವ ಇವರು ಉನ್ನತ ಶಿಕ್ಷಣ ಪಡೆಯಲು ವಿದೇಶಕ್ಕೆ ತೆರಳುವಾಗ ಯಾವುದೇ ರೀತಿಯ ಅನುಮತಿಯನ್ನು ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ಅನುಪಸ್ಥಿತಿಯಲ್ಲಿ ಗ್ರಾಮಸಭೆಯ ಖಾತೆಯನ್ನು ನಿರ್ವಹಣೆ ನಡೆಸುವ ಬಗ್ಗೆ ಹಾಗೂ ಖಾತೆಯಲ್ಲಿ ಹಣಕಾಸಿನ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ತನಿಖೆ ನಡೆಸಲು ಹರ್ದೋಯಿ ಮುಖ್ಯ ಅಭಿವೃದ್ಧಿ ಅಧಿಕಾರಿ ಆದೇಶಿಸಿದ್ದಾರೆ. ಇದನ್ನೂ ಓದಿ: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು- ಆಸ್ಪತ್ರೆಗೆ ದಾಖಲು
Advertisement
Advertisement
ಸದ್ಯ ವೈಶಾಲಿ ರೊಮೇನಿಯಾದಲ್ಲಿದ್ದು ಅವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲಾಗುವುದು. ಬಳಿಕ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.