ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ರಷ್ಯಾ ವಿರುದ್ಧ ಮತ ಚಲಾಯಿಸದೇ ಭಾರತ ತಟಸ್ಥ ನೀತಿಯನ್ನು ಅನುಸರಿಸಿದ್ದಕ್ಕೆ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಮ್ಮ ಕಷ್ಟಗಳಲ್ಲಿ ರಷ್ಯಾ ನಮ್ಮ ಬೆಂಬಲಕ್ಕೆ ನಿಂತಿದೆ. ಆದರೆ ಸ್ನೇಹಿತ ತಪ್ಪು ಮಾಡಿದರೆ, ನಾವು ಆತನನ್ನು ಸರಿಪಡಿಸಬೇಕು. ಒಂದು ಕಡೆ ಪ್ರಜಾಪ್ರಭುತ್ವವನ್ನು ಪ್ರತಿಪಾದಿಸುವ ರಾಷ್ಟ್ರಗಳು ಮತ್ತು ಇತರರು ನಿರಂಕುಶ ಮಾರ್ಗವನ್ನು ಬೆಂಬಲಿಸುವ ಸಂದರ್ಭದಲ್ಲಿ ಭಾರತ ತನ್ನ ಪಕ್ಷವನ್ನು ಆರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: Russia-Ukraine War – ಏನಿದು ರಷ್ಯಾ ಟ್ಯಾಂಕರ್‌ಗಳ ಮೇಲೆ Z ಮಾರ್ಕ್?
Advertisement
A New Iron Curtain has descended over the world . India will have to pick sides. It no longer has the luxury of sitting on top of the Iron Curtain because India gradually gutted Non- Alignment going all the way back to 1991. My column tomorrow will explain it. @VinodSharmaView https://t.co/dTRMTWOTTn
— Manish Tewari (@ManishTewari) February 26, 2022
Advertisement
ಭಾರತದ ಅಲಿಪ್ತ ಆಂದೋಲನ (NAM) ನೀತಿ 1991 ರಿಂದ ಕ್ರಮೇಣ ಕೊನೆಗೊಂಡಿದೆ. ಈಗಲೂ ಭಾರತವು ಅದೇ ನೀತಿಗೆ ಮರಳಲು ಯೋಚಿಸಿದರೆ ಅದು ತಪ್ಪಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್ ಹಿಡಿದ ದಂಪತಿ
Advertisement
ಉಕ್ರೇನ್ ಮೇಲೆ ರಷ್ಯಾ ದಾಳಿಯನ್ನು ಖಂಡಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತೀಯ ಕಾಲಮಾನ ಶನಿವಾರ ನಸುಕಿನ ಜಾವ ಸಭೆ ಆಯೋಜಿಸಲಾಗಿತ್ತು. ಅಮೆರಿಕ ಮತ್ತು ಆಲ್ಬೇನಿಯಾ ಸಂಯುಕ್ತವಾಗಿ ಮಂಡಿಸಿದ ನಿರ್ಣಯದ ಮೇಲೆ ಮತದಾನ ನಡೆದಿತ್ತು.
Advertisement
UNSC’s consideration of the draft resolution on Ukraine
????Watch: India’s Explanation of Vote by Permanent Representative @AmbTSTirumurti ⤵️@MeaIndia pic.twitter.com/UB2L5JLuyS
— India at UN, NY (@IndiaUNNewYork) February 25, 2022
ಭಾರತ, ಚೀನಾ, ಯುಎಇ ದೇಶಗಳು ಮತದಾನದಿಂದ ದೂರ ಉಳಿದಿದ್ದರೆ ಪೋಲೆಂಡ್, ಇಟಲಿ, ನ್ಯೂಜಿಲೆಂಡ್ ಸೇರಿ 11 ದೇಶಗಳು ನಿರ್ಣಯದ ಪರವಾಗಿ ಮತ ಹಾಕಿವೆ. ರಷ್ಯಾ ದೇಶ ಊಹಿಸಿದಂತೆಯೇ ವಿಟೋ ಅಧಿಕಾರ ಚಲಾಯಿಸಿ, ನಿರ್ಣಯ ಪಾಸ್ ಆಗದಂತೆ ತಡೆದಿದೆ. ಈ ಬಗ್ಗೆ ಅಮೆರಿಕ ಆಕ್ರೋಶ ಹೊರಹಾಕಿದೆ. ಈ ವಿಚಾರವನ್ನು ಸಾಮಾನ್ಯ ಸಭೆಗೆ ಕೊಂಡೊಯ್ಯುವುದಾಗಿ ಘೋಷಿಸಿದೆ.
ಈ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ ಭಾರತದ ಶಾಶ್ವತ ರಾಯಭಾರಿ ತಿರುಮೂರ್ತಿ, ವಿವಾದ ಇತ್ಯರ್ಥಕ್ಕೆ ಚರ್ಚೆಯೊಂದೇ ಸಮಾಧಾನ. ಆದರೆ ಈ ಕ್ಷಣದಲ್ಲಿ ಅದು ಸಾಧ್ಯವಾಗಿಲ್ಲ. ಎರಡು ದೇಶಗಳು ರಾಜತಾಂತ್ರಿಕ ಮಾರ್ಗವನ್ನು ಕೈಬಿಟ್ಟಿದ್ದಕ್ಕೆ ವಿಷಾದವಿದೆ. ಸದ್ಯಕ್ಕೆ ಈ ಖಂಡನಾ ನಿರ್ಣಯದಿಂದ ದೂರ ಇರಲು ಭಾರತ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.