ಕೀವ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಸಾಮಾಜಿಕ ಜಾಲತಾಣದಲ್ಲಿ ತಾವಿರುವ ಸ್ಥಳದ ವಿಳಾಸವನ್ನು ಹಂಚಿಕೊಂಡು ನಾನು ಅಡಗಿಕೊಂಡಿಲ್ಲ, ಯಾರಿಗೂ ಹೆದರುವುದಿಲ್ಲ ಎಂದು ರಷ್ಯಾಗೆ ತಿರುಗೇಟು ನೀಡಿದ್ದಾರೆ.
ನಾನು ಬ್ಯಾಂಕೋವಾನಲ್ಲಿರುವ ಕೀವ್‍ನಲ್ಲಿದ್ದು, ನಾನು ಅಡಗಿಕೊಂಡಿಲ್ಲ, ಯಾರಿಗೂ ಹೆದರುವುದಿಲ್ಲ. ಎನೇ ಆಗಲಿ ನಮ್ಮ ಈ ದೇಶಭಕ್ತಿಯ ಯುದ್ಧ ಗೆದ್ದೇ ಗೆಲ್ಲುತ್ತೇವೆ ಎಂದು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಕೆಲ ಸಾಲುಗಳನ್ನು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.
Advertisement
View this post on Instagram
Advertisement
ಫೆಬ್ರವರಿ 24 ರಂದು ರಷ್ಯಾದ ಅಧ್ಯಕ್ಷ ಪುಟಿನ್ ಯುದ್ಧ ಘೋಷಿಸಿದಾಗಿನಿಂದ, ಉಕ್ರೇನಿಯನ್ ನಾಯಕ ರಷ್ಯಾದ ಹಂತಕರ ಮೂರು ಪ್ರಯತ್ನಗಳಿಂದ ಬದುಕುಳಿದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ವಸತಿ ಕಟ್ಟಡಗಳ ಮೇಲೆ ಎಕ್ಸ್ ಗುರುತಿನ ಚಿಹ್ನೆ- ಕಟ್ಟಡ ತೊರೆಯುವಂತೆ ಅಧಿಕಾರಿಗಳ ಸೂಚನೆ
Advertisement
ವೀಡಿಯೋದಲ್ಲಿ ಉಕ್ರೇನಿಯನ್ ಧ್ವಜದಿಂದ ಸುತ್ತುವರೆದಿರುವ ತಮ್ಮ ಮೇಜಿನ ಬಳಿ ಕುಳಿತುಕೊಂಡು ಮಾತನಾಡಿದ ಅವರು, ಇಂದು ರಷ್ಯಾದ ವಿರುದ್ಧದ ನಮ್ಮ ಹೋರಾಟ ನಡೆಯುತ್ತಿರುವುದು ಹನ್ನೆರಡನೇ ದಿನವಾಗಿದೆ. ನಾವೆಲ್ಲರೂ ಈಗ ಯುದ್ಧ ಭೂಮಿಯಲ್ಲಿ ಇದ್ದೇವೆ. ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ನಾನು ರಾಜಧಾನಿ ಕೀವ್‍ನಲ್ಲಿದ್ದು, ನನ್ನ ತಂಡವು ನನ್ನೊಂದಿಗಿದೆ ಎಂದು ಹೇಳಿದರು.
Advertisement
ರಷ್ಯಾ ವಿರುದ್ಧದ ಯುದ್ಧದ ಸಮಯದಲ್ಲಿ ಉಕ್ರೇನಿಯನ್ ಸಶಸ್ತ್ರ ಪಡೆಗಳ ಸೇವೆಗಾಗಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಉಕ್ರೇನ್ ವಿಜಯಶಾಲಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: Russia-Ukraine War – ಏನಿದು ರಷ್ಯಾ ಟ್ಯಾಂಕರ್‌ಗಳ ಮೇಲೆ Z ಮಾರ್ಕ್?
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಫೆಬ್ರವರಿ 24 ರಂದು ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದರು. ಅಂದಿನಿಂದ ರಷ್ಯಾದ ಮಿಲಿಟರಿ ನೂರಾರು ಕ್ಷಿಪಣಿ ಮತ್ತು ಫಿರಂಗಿ ದಾಳಿಗಳನ್ನು ದೇಶಾದ್ಯಂತ ಮತ್ತು ಇತರ ಸೈಟ್‍ಗಳ ಮೇಲೆ ನಡೆಸಿವೆ.
ಹೋರಾಟ ಪ್ರಾರಂಭವಾದಾಗಿನಿಂದ ಕನಿಷ್ಠ 331 ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ದೃಢಪಡಿಸಲಾಗಿದೆ. ಆದರೆ ನಿಜವಾದ ಸಂಖ್ಯೆ ಬಹುಶಃ ಹೆಚ್ಚು ಎಂದು ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಹೇಳಿದೆ. ಇದರ ಮಧ್ಯೆ 1.5 ದಶಲಕ್ಷಕ್ಕೂ ಹೆಚ್ಚು ಜನರು ಉಕ್ರೇನ್‍ನಿಂದ ಪಲಾಯನ ಮಾಡಿದ್ದಾರೆ.