ಕೀವ್: ಉಕ್ರೇನ್ ಮೇಲಿನ ರಷ್ಯಾ ಆಕ್ರಮಣ ಮುಂದುವರಿದಿದ್ದು, ದಾಳಿಗೆ ಉಕ್ರೇನ್‌ನಲ್ಲಿ ಇದುವರೆಗೆ 2 ಸಾವಿರ ನಾಗರಿಕರು ಬಲಿಯಾಗಿದ್ದಾರೆ.
ರಷ್ಯಾ ಯುದ್ಧದಿಂದಾಗಿ ಉಕ್ರೇನ್‌ನಲ್ಲಿ ನೂರಾರು ಸಂಖ್ಯೆಯಲ್ಲಿ ಸಾರಿಗೆ ವ್ಯವಸ್ಥೆ, ಆಸ್ಪತ್ರೆಗಳು, ಮನೆಗಳು, ಕಿಂಡರ್‌ಗಾರ್ಡನ್ಸ್ ನಾಶವಾಗಿವೆ ಎಂದು ಉಕ್ರೇನ್‌ನ ತುರ್ತು ಸೇವಾ ವಿಭಾಗ ತಿಳಿಸಿದೆ. ಇದನ್ನೂ ಓದಿ: ಈ ಕೂಡಲೇ ಖಾರ್ಕಿವ್ ತೊರೆಯಿರಿ: ಭಾರತೀಯರಿಗೆ ರಾಯಭಾರ ಕಚೇರಿಯಿಂದ ತುರ್ತು ಸಂದೇಶ
Advertisement
Advertisement
ಪ್ರತಿ ಗಂಟೆಗೆ ಮಕ್ಕಳು, ಮಹಿಳೆಯರು, ರಕ್ಷಣಾ ಪಡೆ ಸಿಬ್ಬಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ರಷ್ಯಾ ದಾಳಿಗೆ ಪ್ರತಿ ದಾಳಿ ನಡೆಸುತ್ತಿದ್ದು, ಇದುವರೆಗೆ ರಷ್ಯಾದ 6 ಸಾವಿರ ಸೈನಿಕರನ್ನು ಹತ್ಯೆ ಮಾಡಲಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ತಿಳಿಸಿದ್ದಾರೆ.
Advertisement
ರಷ್ಯಾದ ನಿರಂತರ ಶೆಲ್, ಕ್ಷಿಪಣಿ ದಾಳಿಗಳಿಂದಾಗಿ ಉಕ್ರೇನ್‌ನ ಬೃಹತ್ ಕಟ್ಟಡಗಳು ಧರೆಗುರುಳಿವೆ. ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯಾಗಿದೆ. ಯುದ್ಧಪೀಡತ ಪ್ರದೇಶಗಳಲ್ಲಿ ಅಭದ್ರತೆ ಭೀತಿ ಹೆಚ್ಚಾಗಿದ್ದು, ಉಕ್ರೇನಿಯನ್ ಜನತೆಗೆ ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ. ಇದನ್ನೂ ಓದಿ: ರಷ್ಯಾ- ಉಕ್ರೇನ್ ಯುದ್ಧ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ
Advertisement
ರಷ್ಯಾ ಸೇನಾ ಪಡೆ ಹಂತ ಹಂತವಾಗಿ ಉಕ್ರೇನ್ ರಾಜಧಾನಿ ಕೀವ್ ಅನ್ನು ಆಕ್ರಮಿಸುತ್ತಿದ್ದು, ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಳ್ಳಲು ದಾಳಿಗಳನ್ನು ತೀವ್ರಗೊಳಿಸಿದೆ. ಇದನ್ನರಿತ ಭಾರತದ ರಾಯಭಾರಿ ಕಚೇರಿಯು ಕೀವ್‌ನಲ್ಲಿರುವ ಭಾರತೀಯ ಪ್ರಜೆಗಳು ಕೂಡಲೇ ಗಡಿ ಪ್ರದೇಶಗಳಿಗೆ ತೆರಳುವಂತೆ ಸೂಚಿಸಿತ್ತು. ಅಲ್ಲದೇ ಖಾರ್ಕಿವ್ ನಗರದಲ್ಲಿ ಭಾರೀ ಪ್ರಮಾಣದಲ್ಲಿ ರಷ್ಯಾ ಸೇನಾ ಪಡೆ ದಾಳಿ ನಡೆಸುತ್ತಿದ್ದು, ಇಲ್ಲಿ ಸಿಲುಕಿರುವವರೂ ಸುರಕ್ಷಿತ ಸ್ಥಳಗಳಿಗೆ ಬರುವಂತೆ ಸೂಚಿಸಲಾಗಿದೆ.