ಮಾಸ್ಕೋ: ಮೂರನೇ ಮಹಾಯುದ್ಧ ನಡೆದರೆ ಅದು ಪರಮಾಣು ಶಸ್ತ್ರಾಸ್ತ್ರಗಳನ್ನು ಒಳಗೊಂಡಿರುತ್ತದೆ. ಜೊತೆಗೆ ವಿನಾಶಕಾರಿಯಾಗಿರುತ್ತದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿದ್ದಾರೆ.
ಕೀವ್ ಪರಮಾಣು ಶಸ್ತ್ರಾಸ್ತ್ರಗಳನ್ನು ಸ್ವಾಧೀನಪಡಿಸಿಕೊಂಡರೆ ನಿಜವಾದ ಅಪಾಯ ಎದುರಿಸಬೇಕಾಗುತ್ತದೆ ಎಂದು ಉಕ್ರೇನ್‌ಗೆ ಲಾವ್ರೊವ್ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಇದನ್ನೂ ಓದಿ: ಭಾರತದ ಧ್ವಜ ಹಿಡಿದು ಸುರಕ್ಷಿತವಾಗಿ ಉಕ್ರೇನ್ ಗಡಿ ದಾಟಿದ ಪಾಕಿಸ್ತಾನ ವಿದ್ಯಾರ್ಥಿಗಳು!
ರಷ್ಯಾದ ಪಡೆಗಳು ಉಕ್ರೇನ್‌ನ ಎರಡನೇ ನಗರ ಖಾರ್ಕಿವ್‌ನ ಮಧ್ಯಭಾಗದಲ್ಲಿರುವ ಸ್ಥಳೀಯ ಸರ್ಕಾರದ ಪ್ರಧಾನ ಕಛೇರಿಯ ಮೇಲೆ ಭೀಕರ ದಾಳಿ ನಡೆಸಿತು. ಇದರಿಂದ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ಮತ್ತೊಂದೆಡೆ ಉಕ್ರೇನ್ ರಾಜಧಾನಿ ಕೀವ್‌ನ ಟೆಲಿವಿಷನ್ ಟವರ್ ಮೇಲೂ ರಷ್ಯಾ ದಾಳಿ ನಡೆಸಿದ್ದು, ಐವರು ಬಲಿಯಾಗಿದ್ದಾರೆ.
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜೊತೆಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ದೂರವಾಣಿ ಕರೆಯಲ್ಲಿ ಮಾತನಾಡಿ, ಆಕ್ರಮಣಕಾರಿ ರಷ್ಯಾವನ್ನು ತಡೆಯಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 6 ದಿನದಲ್ಲಿ 6 ಸಾವಿರ ರಷ್ಯಾ ಯೋಧರ ಹತ್ಯೆ: ಉಕ್ರೇನ್ ಅಧ್ಯಕ್ಷ
ನಿನ್ನೆ ಕೂಡ ಯೂರೋಪಿಯನ್ ನಾಯಕರೊಂದಿಗೆ ವೀಡಿಯೋ ಕರೆಯಲ್ಲಿ ಮಾತನಾಡಿದ್ದ ಝೆಲೆನ್‌ಸ್ಕಿ, ನಾವು ನಿಮ್ಮೊಂದಿಗಿದ್ದೇವೆ ಎಂಬುದನ್ನು ಸಾಬೀತುಪಡಿಸಿ ಎಂದು ಯೂರೋಪಿಯನ್ ನಾಯಕರಿಗೆ ತಾಕೀತು ಮಾಡಿದ್ದರು. ನೀವಿಲ್ಲದೇ ಉಕ್ರೇನ್ ಏಕಾಂಗಿಯಾಗಲಿದೆ ಎಂದು ಹೇಳಿದ್ದರು.
ರಷ್ಯಾದ ಆಕ್ರಮಣದ ನಂತರ 6,77,000 ಕ್ಕೂ ಹೆಚ್ಚು ಜನರು ಉಕ್ರೇನ್‌ನಿಂದ ಪಲಾಯನ ಮಾಡಿದ್ದಾರೆ. ಪಲಾಯನ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಯುಎನ್‌ನ ನಿರಾಶ್ರಿತರ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?