ಕೀವ್: ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ. ಅದೇ ಅವನ ಕೊನೆ ಮಾತಾಗಿತ್ತು. ನಮಗೆಂದು ಊಟ ತರಲು ಹೋದವರ ಬರಲೇ ಇಲ್ಲ ಎಂದು ಉಕ್ರೇನ್‍ನ ಖಾರ್ಕಿವ್‍ನಲ್ಲಿ ಶೆಲ್ ದಾಳಿ ವೇಳೆ ಮೃತಪಟ್ಟ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್‍ರನ್ನು ನೆನೆಪಿಸಿಕೊಂಡು ಅವರ ಸ್ನೇಹಿತ ಶ್ರೀಕಾಂತ್ ಭಾವುಕರಾಗಿದ್ದಾರೆ.
Advertisement
ರಷ್ಯಾ-ಉಕ್ರೇನ್ ನಡುವಿನ ಯುದ್ಧದ ತೀವ್ರಗೊಳ್ಳುತ್ತಿದೆ. ಆದಷ್ಟು ಬೇಗ ಉಕ್ರೇನ್ ತೊರೆಯಿರಿ ಎಂದು ಕೇಂದ್ರ ಸರ್ಕಾರ ಸೂಚನೆ ಕೊಟ್ಟ ಬೆನ್ನಲ್ಲೇ ರಷ್ಯಾ ಶೆಲ್ ದಾಳಿಗೆ ಕನ್ನಡಿಗ ನವೀನ್ (22) ಬಲಿಯಾಗಿದ್ದಾರೆ. ಖಾರ್ಕಿವ್‌ನಲ್ಲಿ ಮೆಡಿಕಲ್ ಓದುತ್ತಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಚಳಗೇರಿಯ ನವೀನ್ ದುರಂತ ಸಾವನ್ನಪ್ಪಿದ್ದಾರೆ. ಖಾರ್ಕೀವ್‍ನಲ್ಲಿ ಇವತ್ತು ಬೆಳಗ್ಗೆ 7 ಗಂಟೆಗೆ ಸೂಪರ್ ಮಾರ್ಕೆಟ್‍ಗೆ ಹೋಗಿ ಸಾಲಿನಲ್ಲಿ ನಿಂತಿದ್ದಾಗ ನವೀನ್ ದುರ್ಮರಣಕ್ಕೀಡಾಗಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಮಡಿದ ಕನ್ನಡಿಗನಿಗೆ ಸ್ಯಾಂಡಲ್ ವುಡ್ ಕಣ್ಣೀರು
Advertisement
Advertisement
ಈ ಬಗ್ಗೆ, ಖಾರ್ಕಿವ್‌ನಲ್ಲಿರುವ ನವೀನ್ ಸ್ನೇಹಿತ ಶ್ರೀಕಾಂತ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಬೆಳಗ್ಗೆ 7.30ಕ್ಕೆ ರೈಲ್ವೇ ನಿಲ್ದಾಣಕ್ಕೆ ಹೋಗಬೇಕಿತ್ತು. ರೈಲಿನ ಮೂಲಕ ಪೋಲೆಂಡ್ ಗಡಿ ತಲುಪಬೇಕಿತ್ತು. ನವೀನ್ ಸೇರಿ 8 ಜನರ ನಮ್ಮ ತಂಡ ರೈಲ್ವೇ ನಿಲ್ದಾಣಕ್ಕೆ ಹೊರಡಬೇಕಿತ್ತು. ಈ ವೇಳೆ, ಎಲ್ಲರಿಗೂ ಊಟ ತರಲು ಬಂಕರ್‌ನಿಂದ ನವೀನ್ ಹೊರ ಹೋಗಿದ್ದ. ಸೂಪರ್ ಮಾರ್ಕೆಟ್ ಬಳಿ ತುಂಬಾ ಕ್ಯೂ ಇದೆ. ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ. ಅದೇ ಅವನ ಕೊನೆ ಮಾತಾಗಿತ್ತು. ನಮಗೆಂದು ಊಟ ತರಲು ಹೋದವರ ಬರಲೇ ಇಲ್ಲ ಅಂತ ಭಾವುಕರಾದರು. ಇದನ್ನೂ ಓದಿ: ಖಾರ್ಕಿವ್ ಶೆಲ್ ದಾಳಿ ಯುದ್ಧಾಪರಾಧ: ಉಕ್ರೇನ್ ಅಧ್ಯಕ್ಷ
Advertisement