ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

Public TV
1 Min Read
child crying 1

ಕೀವ್‌: ರಷ್ಯಾ ದಾಳಿಗೆ ಉಕ್ರೇನ್ ತತ್ತರಗೊಂಡಿದ್ದು, ಬಾಂಬ್ ದಾಳಿ ವೇಳೆ ತಂದೆ-ತಾಯಿಯನ್ನು ಕಳೆದುಕೊಂಡ ಬಾಲಕನೊಬ್ಬನ ಆಕ್ರಂದನ ನಡು ಬೀದಿಯಲ್ಲೇ ಮುಗಿಲು ಮುಟ್ಟಿರುವ ಮನಕಲಕುವ ವೀಡಿಯೋವೊಂದು ವೈರಲ್ ಆಗಿದೆ.

ರಷ್ಯಾ ಉಕ್ರೇನ್ ಮೇಲೆ ಎಲ್ಲಾ ಕಡೆ ದಾಳಿ ನಡೆಸುತ್ತಿದೆ. ಜನವಸತಿ ಪ್ರದೇಶದ ಮೇಲೆ ಫೈಟರ್ ಜೆಟ್‍ಗಳ ಬಾಂಬ್ ದಾಳಿಯಾಗುತ್ತಿದೆ. ಜನರು ತಮ್ಮ ಬಂಧು ಬಳಗವನ್ನು ಕಳೆದುಕೊಂಡಿರುವ ದುಃಖದಲ್ಲಿದ್ದಾರೆ. ಬಾಂಬ್ ಸ್ಫೋಟದಲ್ಲಿ ಧೈರ್ಯ ತುಂಬುತ್ತಿದ್ದ ಪೋಷಕರನ್ನೇ ಕಳೆದುಕೊಂಡ ಬಾಲಕ ಗೋಳಾಟ ನಡೆಸುತ್ತಿದ್ದಾನೆ. ಆದರೆ ಅಲ್ಲಿರುವವರ್ಯಾರು ಆತನನ್ನು ಸಮಾಧಾನ ಪಡಿಸಲು ಜನರಿಲ್ಲದ ಪರಿಸ್ಥಿತಿಯಲ್ಲದ ಸ್ಥಿತಿಯಲ್ಲಿದ್ದಾರೆ. ಜನರು ಯಾವಾಗ ಎಲ್ಲಿ ಬಾಂಬ್ ದಾಳಿ ಉಂಟಾಗುತ್ತದೆ ಎನ್ನುವ ಭೀತಿಯಲ್ಲಿದ್ದಾರೆ.

child crying 2

ಬಾಂಬ್ ಸ್ಫೋಟಕ್ಕೆ ಜನರು ದಿಕ್ಕಾಪಾಲಾಗಿ ಓಡುತ್ತಿದ್ದಾರೆ. ಈಗಾಗಲೇ ಕೀವ್ ನಗರವನ್ನು ರಷ್ಯಾ ಸೇನೆ ಸಂಪೂರ್ಣವಾಗಿ ಸುತ್ತವರಿದಿದ್ದು, ಕ್ಷಣಕ್ಷಣಕ್ಕೂ ಆತಂಕ ಸೃಷ್ಟಿಯಾಗುತ್ತಿದೆ. ಕೀವ್‍ನಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಂಟರ್‍ನೆಟ್ ಸೇವೆ ಕೂಡ ಸ್ಥಗಿತಗೊಂಡಿದೆ. ಈ ಮಧ್ಯೆಯೂ ಉಕ್ರೇನ್ ಅಧ್ಯಕ್ಷ ದಿಟ್ಟತನದ ಮಾತಗಳನ್ನಾಡಿದ್ದಾರೆ. ಇದನ್ನೂ ಓದಿ:  ಉಕ್ರೇನ್‌ ಬಿಕ್ಕಟ್ಟು – ಬೆಂಗಳೂರು ವಿದ್ಯಾರ್ಥಿನಿಯ ವೀಡಿಯೋ ಶೇರ್‌ ಮಾಡಿ ಕೇಂದ್ರಕ್ಕೆ ರಾಗಾ ಮನವಿ

Zelensky

ಕೀವ್ ತೊರೆಯುವಂತೆ ಅಮೆರಿಕ ಝೆಲೆನ್‍ಸ್ಕಿಗೆ ಸಲಹೆ ನೀಡಿತ್ತು. ಆದರೆ ದೊಡ್ಡಣ್ಣನ ಸಲಹೆಯನ್ನು ಉಕ್ರೇನ್ ಅಧ್ಯಕ್ಷ ಧಿಕ್ಕರಿಸಿದ್ದಾರೆ. ನಾನು ನನ್ನ ದೇಶದಲ್ಲಿಯೇ ಇರುತ್ತೇನೆ. ನನಗ್ಯಾವ ಜೀವ ಭಯ ಇಲ್ಲ. ಹೀಗಾಗಿ ನನಗೆ ಸ್ಥಳಾಂತರ ಬೇಡ, ಮದ್ದುಗುಂಡುಗಳು ಬೇಕು. ರಷ್ಯಾ ಸೇನೆ ವಿರುದ್ಧ ನಾನು ಕೊನೆಯವರೆಗೂ ಹೋರಾಟ ಮಾಡುತ್ತೇನೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ

Share This Article
Leave a Comment

Leave a Reply

Your email address will not be published. Required fields are marked *