ಕೀವ್: ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್‌ಗಳನ್ನು ಎಲ್ಲರೂ ನೋಡಿಯೇ ಇರುತ್ತಾರೆ. ಜನರ ಗಮನ ಸೆಳೆಯಲು ಯೂಟ್ಯೂಬರ್ಸ್‌ಗಳು ಹೊಸ ಹೊಸ ರೀತಿಯಲ್ಲಿ ವ್ಲಾಗ್, ಲೈವ್ ಸ್ಟ್ರೀಮ್ ಮಾಡುತ್ತಲೇ ಇರುತ್ತಾರೆ. ಇಲ್ಲೊಂದು ಉಕ್ರೇನ್‌ನ ರಾಕ್ ಬ್ಯಾಂಡ್ ಭೀಕರ ಯುದ್ಧದ ನಡುವೆಯೂ ಬಾಂಬ್ ಶೆಲ್ಟರ್‌ನಿಂದ ಲೈವ್ ಸ್ಟ್ರೀಮ್ ಮಾಡಿ ಜನರ ಹುಬ್ಬೇರಿಸುವಂತೆ ಮಾಡಿದ್ದಾರೆ.
ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿ ಇಂದಿಗೆ 16 ನೇ ದಿನ. ಇಂತಹ ಪರಿಸ್ಥಿತಿಯಲ್ಲಿ ಮನೆ, ನೆಲೆ ಕಳೆದುಕೊಂಡವರು ಸಾವಿರಾರು. ಉಕ್ರೇನ್‌ನ ಸೆಲೋ ಐ ಲುಡಿ ಎಂಬ ರಾಕ್ ಬ್ಯಾಂಡ್ ಯುದ್ಧದ ಪರಿಸ್ಥಿತಿಯಲ್ಲಿ ಬಾಂಬ್ ಶೆಲ್ಟರ್‌ನಿಂದ ಯೂಟ್ಯೂಬ್‌ನಲ್ಲಿ ತಮ್ಮ ಗಾಯನದ ಲೈವ್ ಸ್ಟ್ರೀಮ್ ಮಾಡಿದ್ದಾರೆ. ಇದನ್ನೂ ಓದಿ: ರಷ್ಯಾ ಉಕ್ರೇನ್ ಮೇಲೆ ವ್ಯಾಕ್ಯೂಮ್ ಬಾಂಬ್ ಹಾಕುವುದು ಖಚಿತ ಎಂದ ಬ್ರಿಟನ್
Advertisement
Advertisement
ಈ ಬ್ಯಾಂಡ್ ಹಿಂದೆ ತಮ್ಮ ಸ್ಟುಡಿಯೋದಿಂದ ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತಿದ್ದು, ಯುದ್ಧದಿಂದಾಗಿ ತಮ್ಮ ಮನೆ, ಸ್ಟುಡಿಯೋ ಎಲ್ಲವನ್ನೂ ಕಳೆದುಕೊಂಡಿದೆ. ಇದೀಗ ಬಾಂಬ್ ಶೆಲ್ಟರ್‌ನಲ್ಲಿ ಆಶ್ರಯ ಪಡೆದುಕೊಂಡಿರುವ ರಾಕ್ ಬ್ಯಾಂಡ್ ತಂಡ ಅಲ್ಲಿಂದಲೇ ತಮ್ಮ ಲೈವ್ ಸ್ಟ್ರೀಮ್ ನಡೆಸುತ್ತಿದೆ. ಇದನ್ನೂ ಓದಿ: ರಷ್ಯಾದಿಂದ ತೈಲ ಆಮದಿಗೆ ಮಾತ್ರ ಅಮೆರಿಕ ನಿರ್ಬಂಧ – ಯುರೇನಿಯಂಗೆ ಇಲ್ಲ ನಿಷೇಧ
Advertisement
ವಿಶ್ವಸಂಸ್ಥೆ ನೀಡಿರುವ ವರದಿಯ ಪ್ರಕಾರ ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ೨೦ ಲಕ್ಷ ಉಕ್ರೇನಿಯನ್ನರು ದೇಶವನ್ನು ತೊರೆದಿದ್ದಾರೆ. ಉಕ್ರೇನ್‌ನ ಹೆಚ್ಚಿನ ಪ್ರಜೆಗಳು ಹತ್ತಿರದ ದೇಶಗಳಾದ ಪೋಲೆಂಡ್, ಹಂಗೇರಿ, ಸ್ಲೋವಾಕಿಯಾ, ರಷ್ಯಾ ಹಾಗೂ ಮಾಲ್ಡಿವ್ಸ್‌ಗೆ ಪಲಾಯನ ಮಾಡಿದ್ದಾರೆ.