ಲಂಡನ್: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ವಿಚಾರವಾಗಿ ಭಾರತ ತಳೆದಿರುವ ನಿಲುವಿನಿಂದ ತುಂಬಾ ನಿರಾಶೆಯಾಗಿದೆ ಎಂದು ಯುಕೆ ಸಚಿವೆ ಅನ್ನಿ-ಮೇರಿ ಟ್ರೆವೆಲಿಯನ್ ಹೇಳಿದ್ದಾರೆ.
ಈ ನಿಲುವಿನಿಂದಾಗಿ ಭಾರತ ಮತ್ತು ಯುಕೆ ನಡುವಿನ ವ್ಯಾಪಾರದ ಮೇಲೆ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಭಾರತದ ನಿಲುವಿನಿಂದ ನಾವು ತುಂಬಾ ನಿರಾಶೆಗೊಂಡಿದ್ದೇವೆ. ಆದರೆ ನಾವು ಭಾರತೀಯ ಪಾಲುದಾರರೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕೀವ್ ರಕ್ಷಣೆಗಾಗಿ ರಾಕೆಟ್ ಬಿಟ್ಟು ಗನ್ ಹಿಡಿದು ಹೋರಾಟಕ್ಕೆ ಮುಂದಾದ ಟೆನ್ನಿಸ್ ಆಟಗಾರ
Advertisement
Advertisement
ಭಾರತವು ಯುಕೆಗೆ ಪ್ರಮುಖ ವ್ಯಾಪಾರ ಪಾಲುದಾರ. ಭವಿಷ್ಯದಲ್ಲಿ ಪುಟಿನ್ ಈ ಯುದ್ಧಕ್ಕೆ ಧನಸಹಾಯ ನೀಡಲು ಸಾಧ್ಯವಿಲ್ಲ. ಹೀಗಾಗಿ ನಾವು ಪ್ರಪಂಚದಾದ್ಯಂತದ ದೇಶಗಳೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.
Advertisement
ಚೀನಾ ಕೂಡ ಈ ನಿಟ್ಟಿನಲ್ಲಿ ಹೆಜ್ಜೆ ಹಾಕಬೇಕಾಗಿದೆ. ಇದು ಯುಎನ್ ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾಷ್ಟ್ರ. ಭಾರತ ಖಾಯಂ ರಹಿತ ಸದಸ್ಯ ರಾಷ್ಟ್ರ. ರಷ್ಯಾ ವಿಚಾರವಾಗಿ ನಾವು ರಾಜತಾಂತ್ರಿಕ ಒತ್ತಡವನ್ನು ವಿಸ್ತರಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ವಿಶ್ವಸಂಸ್ಥೆ ಕೋರ್ಟ್‌ನಲ್ಲಿ ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತದ ನ್ಯಾಯಾಧೀಶ
Advertisement
ಭಾರತ ಮತ್ತು ಚೀನಾ ರಷ್ಯಾದೊಂದಿಗೆ ನಿಕಟ ಸಂಬಂಧವನ್ನು ಹೊಂದಿವೆ. ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣದ ವಿರುದ್ಧ ಅಂಗೀಕರಿಸಿದ ಯಾವುದೇ ನಿರ್ಣಯದಿಂದ ಉಭಯ ದೇಶಗಳು ದೂರ ಉಳಿದಿವೆ.