ಇರಾನ್‌ಗೆ ಅಣ್ವಸ್ತ್ರ ನೀಡಲು ಮುಂದೆ ಬಂದ ಹಲವು ದೇಶಗಳು!

Public TV
1 Min Read
Iran Ayatollah Ali Khamenei

ಟೆಹ್ರಾನ್: ಇರಾನ್‌ (Iran) ಹಾಗೂ ಇಸ್ರೇಲ್‌ (Israel) ನಡುವಿನ ಸಂಘರ್ಷ ದಿನೇ ದಿನೇ ಹೆಚ್ಚಾಗುತ್ತಿದೆ. ಅಮೆರಿಕ (America) ಸಹ ಅಧಿಕೃತವಾಗಿ ಎಂಟ್ರಿಯಾಗಿ ಇರಾನ್‌ನ ಅಣ್ವಸ್ತ್ರ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಹಲವು ರಾಷ್ಟ್ರಗಳು ಇರಾನ್‌ಗೆ ಅಣ್ವಸ್ತ್ರ ನೀಡಲು ಮುಂದಾಗಿವೆ ಎಂದು ವರದಿಯಾಗಿದೆ.

ರಷ್ಯಾ (Russia) ಹಾಗೂ ಚೀನಾ, ಇರಾನ್‌ಗೆ ಬೆಂಬಲವನ್ನು ಘೋಷಿಸಿವೆ. ಇರಾನ್‌ನ ಅಣ್ವಸ್ತ್ರ ನೆಲೆಗಳ ಮೇಲೆ ಅಮೆರಿಕ ನಡೆಸಿದ ದಾಳಿಯು ಖಂಡನಾರ್ಹ. ಇರಾನ್‌ಗೆ ಅಣ್ವಸ್ತ್ರ ಪೂರೈಸಲು ಹಲವು ದೇಶಗಳು ಮುಂದಾಗಿವೆ ಎಂದು ರಷ್ಯಾ ಅಧ್ಯಕ್ಷ ಪುಟಿನ್‌ ಆಪ್ತ ಡಿಮಿಟ್ರಿ ಮೆಡ್ಡೆಡೆವ್ ಹೇಳಿದ್ದಾರೆ. ಇದನ್ನೂ ಓದಿ: Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ 

ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಚೀನಾ, ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಕಾನೂನುಗಳನ್ನು ಅಮೆರಿಕ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದೆ.

ಇರಾನ್‌ನ ಫೋರ್ಡೊ, ನಟಾಂಜ್ ಮತ್ತು ಎಸ್ಪಹಾನ್‌ ಮೂರು ಪರಮಾಣು ಕೇಂದ್ರಗಳ ಮೇಲೆ ಶನಿವಾರ ಮಧ್ಯರಾತ್ರಿ ಅಮೆರಿಕ ಬಾಂಬ್‌ ದಾಳಿ (Bomb Attack) ನಡೆಸಿತ್ತು. 14,000 ಕೆಜಿ ತೂಕ ಹೊಂದಿರುವ ಹಾಗೂ ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿ ಎಂದು ಗುರುತಿಸಿಕೊಂಡಿರುವ ಬಿ-12 ಬಾಂಬರ್‌ ಬಳಸಿ ದಾಳಿ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅಮೆರಿಕಗೆ ಭೀಕರ ದಾಳಿ ಎದುರಿಸಲು ತಯಾರಾಗಿ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಇಸ್ರೇಲ್‌ ಮೇಲೆ ಮತ್ತೆ ಬ್ಯಾಲಿಸ್ಟಿಕ್ ಮಿಸೈಲ್‌ಗಳ ಸುರಿಮಳೆ – ಅಮೆರಿಕ ದಾಳಿಗೂ ಜಗ್ಗದ ಇರಾನ್‌

Share This Article