– ಭಾರತ-ರಷ್ಯಾ ಸಂಬಂಧ ಬಲಗೊಳ್ಳಲು ಮೋದಿ ಪಾತ್ರ ದೊಡ್ಡದು
ನವದೆಹಲಿ: ಉಕ್ರೇನ್‌ನೊಂದಿಗೆ ಶಾಂತಿಯುತ ಇತ್ಯರ್ಥಕ್ಕಾಗಿ ರಷ್ಯಾ ಕೆಲಸ ಮಾಡುತ್ತಿದೆ ಎಂದು ಹೇಳುವ ಮೂಲಕ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ( Vladimir Puti), ಉಕ್ರೇನ್ ವಿರುದ್ಧದ ಯುದ್ಧ ನಿಲ್ಲಿಸುವ ಸುಳಿವು ಕೊಟ್ಟಿದ್ದಾರೆ.
My remarks during meeting with President Putin. https://t.co/VCcSpgZmWx
— Narendra Modi (@narendramodi) December 5, 2025
ಹೈದರಾಬಾದ್ ಹೌಸ್‌ನಲ್ಲಿ ನಡೆದ ಭಾರತ-ರಷ್ಯಾ (India – Russia) ನಡುವಿನ 23ನೇ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಪುಟಿನ್ ಸಂವಾದ ನಡೆಸಿದರು. ಇದೇ ವೇಳೆ ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ (PM Modi) ಅವರ ಪ್ರಯತ್ನಗಳನ್ನ ಶ್ಲಾಘಿಸಿದರು. ನಂತರ ಉಕ್ರೇನ್‌ನೊಂದಿಗೆ ಶಾಂತಿಯುತ ಇತ್ಯರ್ಥಕ್ಕಾಗಿ ರಷ್ಯಾ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಮೊದಲಿಗೆ ನನ್ನನ್ನ ಭಾರತಕ್ಕೆ ಆಹ್ವಾನಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಉಕ್ರೇನ್ ಜೊತೆಗೆ ಶಾಂತಿಯುತ ಇತ್ಯರ್ಥಕ್ಕಾಗಿ ರಷ್ಯಾ ಕೆಲಸ ಮಾಡುತ್ತಿದೆ. ಅಲ್ಲದೇ ರಷ್ಯಾ ಮತ್ತು ಭಾರತದ ನಡುವಿನ ಸಂಬಂಧವು ನಂಬಿಕೆಯನ್ನ ಆಧರಿಸಿದೆ. ನಾವು ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದ್ರೆ ಮಾತ್ರ ವಿಶ್ವಕ್ಕೆ ಪ್ರಯೋಜನವಾಗುತ್ತದೆ ಎಂದು ತಿಳಿಸಿದರು.
ಭಾರತ-ರಷ್ಯಾ ಸಂಬಂಧ ಬಲಗೊಳ್ಳಲು ಮೋದಿ ಪಾತ್ರ ದೊಡ್ಡದು
ಇದೇ ವೇಳೆ ಪುಟಿನ್, ಪ್ರಧಾನಿ ಮೋದಿ ಅವರನ್ನ ಹಾಡಿ ಹೊಗಳಿದರು. ಕಳೆದ ಕೆಲ ವರ್ಷಗಳಲ್ಲಿ ನೀವು ನಮ್ಮ ಸಂಬಂಧವನ್ನ ಅಭಿವೃದ್ಧಿಪಡಿಸಲು ಸಾಕಷ್ಟು ಕೆಲಸ ಮಾಡಿದ್ದೀರಿ. ಮುಂದಿನ ದಿನಗಳಲ್ಲಿ ಹೈಟೆಕ್ ವಿಮಾನಗಳು, ಬಾಹ್ಯಾಕಾಶ ಪರಿಶೋಧನೆ ಹಾಗೂ ಎಐ (ಕೃತಕ ಬುದ್ಧಿಮತ್ತೆ) ಸೇರಿ ಹಲವು ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಮುಂದುವರಿಯಲಿದೆ ಎಂದು ತಿಳಿಸಿದರು.
ಮುರ್ಮುರಿಂದ ಸ್ವಾಗತ
ಇದಕ್ಕೂ ಮುನ್ನ ಭಾರತ ಪ್ರವಾಸದಲ್ಲಿರುವ ಪುಟಿನ್ ಅವರು ರಾಷ್ಟ್ರಪತಿ ಭವನಕ್ಕೆ ಆಗಮಿಸುತ್ತಿದ್ದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ಅದ್ಧೂರಿ ಸಂಗೀತದ ಮೂಲಕ ರೆಡ್ ಕಾರ್ಪೆಟ್ ಹಾಸಿ ಪುಟಿನ್‌ಗೆ ಸ್ವಾಗತ ಕೋರಲಾಯಿತು. ಅಲ್ಲದೇ ಸೇನಾಪಡೆ ಸಿಬ್ಬಂದಿ 21 ಗನ್ ಸೆಲ್ಯೂಟ್, ಮಿಲಿಟರಿ ಶಿಸ್ತು ಮತ್ತು ಸಕಲ ಗೌರವ ಸಲ್ಲಿಸಿದವು.


