ಕೀವ್: ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧದ ಕಾಮೋಡ ದಟ್ಟವಾಗುತ್ತಿದ್ದು, ಉಕ್ರೇನ್‍ನಲ್ಲಿರುವ ಭಾರತೀಯರು ದೇಶಕ್ಕೆ ಮರಳುವಂತೆ ವಿದೇಶಾಂಗ ಇಲಾಖೆ ಸೂಚನೆ ನೀಡಿದೆ. ಉಕ್ರೇನ್ ರಾಜಧಾನಿ ಕೀವ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಈ ಮಾಹಿತಿ ರವಾನಿಸಿದ್ದು ವಿದ್ಯಾರ್ಥಿಗಳು ಆದ್ಯತೆಯಲ್ಲಿ ದೇಶ ತೊರೆಯುವಂತೆ ಹೇಳಿದೆ.
ಉಕ್ರೇನ್‍ನಲ್ಲಿ ಅನಿಶ್ಚಿತೆ ಹೆಚ್ಚುತ್ತಿದೆ, ರಷ್ಯಾ ಯಾವುದೇ ಸಂದರ್ಭದಲ್ಲೂ ದಾಳಿ ಮಾಡುವ ಸಾಧ್ಯತೆಗಳಿದ್ದು ಯುದ್ಧದ ವಾತಾವರಣ ಹೆಚ್ಚಾಗಿದೆ. ಹೀಗಾಗಿ ಅಲ್ಲಿ ಅನಿವಾರ್ಯವಲ್ಲದೇ ಭಾರತೀಯರು, ವಿಶೇಷವಾಗಿ ವಿದ್ಯಾರ್ಥಿಗಳು ದೇಶಕ್ಕೆ ಮರಳಿ ಎಂದು ತಿಳಿಸಲಾಗಿದೆ. ಅಲ್ಲದೇ ಉಕ್ರೇನ್‍ಗೆ ಅನಿವಾರ್ಯವಲ್ಲದ ಪ್ರಯಾಣ ಮಾಡದಂತೆ ಭಾರತೀಯರಿಗೆ ಮನವಿ ಮಾಡಿದೆ. ಇದನ್ನೂ ಓದಿ: ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಅವಘಡ – ವಿದ್ಯುತ್ ಉತ್ಪಾದನೆ ಸ್ಥಗಿತ
Advertisement
Advertisement
ಕೀವ್‍ನಲ್ಲಿರುವ ರಾಯಭಾರ ಕಚೇರಿಯು ಉಕ್ರೇನ್‍ನಲ್ಲಿರುವ ಭಾರತೀಯರನ್ನು ತನ್ನ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಮನವಿ ಮಾಡಿದೆ, ಅಗತ್ಯವಿದ್ದಾಗ ಸಂಪರ್ಕಿಸುವುದಾಗಿ ಅದು ತಿಳಿಸಿದೆ. ಉಕ್ರೇನ್‍ನಲ್ಲಿ ವಾಸಿಸುವ ಭಾರತೀಯರಿಗೆ ಎಲ್ಲಾ ಸೇವೆಗಳನ್ನು ಒದಗಿಸುತ್ತದೆ ಎಂದು ಮಾರ್ಗಸೂಚಿಗಳಲ್ಲಿ ಹೇಳಲಾಗಿದೆ. ಇದಕ್ಕೂ ಮೊದಲು ಜನವರಿ 26 ರಂದು, ಭಾರತೀಯ ರಾಯಭಾರ ಕಚೇರಿಯು ಉಕ್ರೇನ್‍ನಲ್ಲಿ ವಾಸಿಸುವ ಎಲ್ಲಾ ಭಾರತೀಯರನ್ನು ನೋಂದಾಯಿಸಲು ಕೇಳಿಕೊಂಡಿದ್ದು, ಯಾವುದೇ ಮಾಹಿತಿಯನ್ನು ತ್ವರಿತವಾಗಿ ರವಾನಿಸುವ ಸಾಧ್ಯತೆಗಳಿದೆ. ಇದನ್ನೂ ಓದಿ: ಹೋಟೆಲ್‍ನಲ್ಲಿ ಊಟ, ತಿಂಡಿ ಸಪ್ಲೈಗೆ ಬಂತು ರೋಬೋ – ಮೈಸೂರಿನ ಜನತೆಯ ಮನಗೆದ್ದ ಸಪ್ಲೇಯರ್ ಲೇಡಿ
Advertisement
ರಷ್ಯಾ ಉಕ್ರೇನ್ ಗಡಿ ವಿವಾದ ತಾರಕಕ್ಕೇರಿದ್ದು ಎರಡು ಕಡೆಯ ಸೇನೆಗಳು ಜಮಾವಣೆಗೊಂಡಿವೆ. ರಷ್ಯಾ ಹೆಚ್ಚು ಸೈನಿಕರನ್ನು ನಿಯೋಜನೆ ಮಾಡಿದ್ದು ಯುದ್ಧಕ್ಕೆ ಸನ್ನದ್ಧವಾಗಿದೆ ಎಂದು ಉಕ್ರೇನ್ ಆರೋಪಿಸಿದೆ. ಆದರೆ ಈ ಆರೋಪವನ್ನು ರಷ್ಯಾ ನಿರಾಕರಿಸಿದೆ. ಈ ನಡುವೆ ರಷ್ಯಾ-ಉಕ್ರೇನ್ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತವೂ ಸೇರಿದಂತೆ ಯಾವುದೇ ರಾಷ್ಟ್ರದ ಪಾತ್ರವನ್ನು ಅಮೆರಿಕ ಸ್ವಾಗತಿಸುತ್ತದೆ ಎಂದು ಅಮೆರಿಕ ಈ ಹಿಂದೆ ಶ್ವೇತಭವನದ ವಕ್ತಾರರು ಹೇಳಿದ್ದರು.