ನವದೆಹಲಿ: ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರು ಎರಡು ದಿನಗಳ ಭೇಟಿಗಾಗಿ ಗುರುವಾರ ಭಾರತಕ್ಕೆ ಆಗಮಿಸಿದ್ದಾರೆ. ಕಳೆದ ತಿಂಗಳು ಉಕ್ರೇನ್ ಮೇಲೆ ರಷ್ಯಾ ಆಕ್ರಮಣವನ್ನು ಆರಂಭಿಸಿದ ನಂತರ ಇದು ಭಾರತಕ್ಕೆ ಅವರ ಮೊದಲ ಪ್ರವಾಸವಾಗಿದೆ.
ಅಧಿಕೃತ ಭೇಟಿಗಾಗಿ ನವದೆಹಲಿಗೆ ಆಗಮಿಸುತ್ತಿರುವ ರಷ್ಯಾದ ಒಕ್ಕೂಟದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಸ್ವಾಗತಿಸುತ್ತೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಗ ಅಳುತ್ತಿದ್ದರೂ ನನ್ನ ಮೇಲೆ ಅತ್ಯಾಚಾರ ಮಾಡಿದ್ರು- ಉಕ್ರೇನ್ ಮಹಿಳೆ
ಲಾವ್ರೊವ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾರಿಯಾ ಜಖರೋವಾ ತಿಳಿಸಿತ್ತು. ಆದರೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಹೊರಡಿಸಿರುವ ಲಾವ್ರೊವ್ ಅವರ ಭೇಟಿಯ ಮಾಧ್ಯಮ ಪ್ರಕಟಣೆಯಲ್ಲಿ ರಷ್ಯಾದ ವಿದೇಶಾಂಗ ಸಚಿವರು ಮತ್ತು ಪ್ರಧಾನಿ ನಡುವಿನ ಯಾವುದೇ ಸಭೆಯನ್ನು ಉಲ್ಲೇಖಿಸಿಲ್ಲ ಎನ್ನಲಾಗಿದೆ.
ಮಾತುಕತೆಯ ಸಿದ್ಧತೆಗಳ ಬಗ್ಗೆ ತಿಳಿದಿರುವ ಮೂಲಗಳು, ರಷ್ಯಾದಿಂದ ವಿವಿಧ ಮಿಲಿಟರಿ ಯಂತ್ರಾಂಶಗಳು ಮತ್ತು S-400 ಕ್ಷಿಪಣಿ ವ್ಯವಸ್ಥೆಗಳ ಘಟಕಗಳನ್ನು ಸಮಯೋಚಿತವಾಗಿ ತಲುಪಿಸುವುದನ್ನು ಖಚಿತಪಡಿಸಿಕೊಳ್ಳಲು ಭಾರತವು ಒತ್ತಡ ಹೇರುವ ಸಾಧ್ಯತೆಯಿದೆ ಎಂದು ಹೇಳಿವೆ. ಇದನ್ನೂ ಓದಿ: ಪ್ಲುಟೋದಲ್ಲಿ ಹೊಸ ವಿಸ್ಮಯ – ಸೌರವ್ಯೂಹದಲ್ಲಿ ಎಲ್ಲೂ ಕಾಣಿಸದ ಮಂಜಿನ ಜ್ವಾಲಾಮುಖಿಯ ಸುಳಿವು
Welcoming the Foreign Minister of the Russian Federation Sergey Lavrov as he arrives in New Delhi for an official visit. pic.twitter.com/eHHCRgF30y
— Arindam Bagchi (@MEAIndia) March 31, 2022
ರಷ್ಯಾ ವಿದೇಶಾಂಗ ಸಚಿವರು ಎರಡು ದಿನಗಳ ಚೀನಾ ಪ್ರವಾಸ ಮುಗಿಸಿ ಭಾರತಕ್ಕೆ ಆಗಮಿಸಿದ್ದಾರೆ. ಉಕ್ರೇನ್ ಜೊತೆಗಿನ ಸಂಘರ್ಷವನ್ನು ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಭಾರತ, ರಷ್ಯಾವನ್ನು ಒತ್ತಾಯಿಸುತ್ತಿದೆ.
ಭಾರತ ಇಲ್ಲಿಯವರೆಗೆ ಉಕ್ರೇನ್‌ನ ಆಕ್ರಮಣಕ್ಕಾಗಿ ರಷ್ಯಾವನ್ನು ಟೀಕಿಸಿಲ್ಲ ಮತ್ತು ರಷ್ಯಾದ ಆಕ್ರಮಣವನ್ನು ಖಂಡಿಸುವಲ್ಲಿ ವಿಶ್ವಸಂಸ್ಥೆಯ ವೇದಿಕೆಗಳಲ್ಲಿ ಮತದಾನದಿಂದ ದೂರವಿತ್ತು. ಉಕ್ರೇನ್‌ನಲ್ಲಿನ ಮಾನವೀಯ ಬಿಕ್ಕಟಿನ ಕುರಿತು ರಷ್ಯಾ ನಿರ್ಣಯ ಮಂಡಿಸಿದಾಗ ಭಾರತವೂ ದೂರವಿತ್ತು. ಇದು ಸಂಘರ್ಷದ ಬಗ್ಗೆ ಅದರ ತಟಸ್ಥ ಸ್ಥಾನವನ್ನು ಪ್ರತಿಬಿಂಬಿಸುತ್ತದೆ. ಕಳೆದ ವಾರ ಜೈಶಂಕರ್ ಸಂಸತ್ತಿನಲ್ಲಿ ಉಕ್ರೇನ್ ಸಂಘರ್ಷದ ಬಗ್ಗೆ ಭಾರತದ ನಿಲುವು ಸ್ಥಿರವಾಗಿದೆ ಮತ್ತು ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದರು.