ಮಾಸ್ಕೋ: ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅಭಿನಂದನೆ ಸಲ್ಲಿಸಿದ್ದಾರೆ.
Advertisement
ಪುಟಿನ್ ಈ ಕುರಿತು ಟ್ವೀಟ್ ಮಾಡಿದ್ದು, ನಾವು ಭಾರತದೊಂದಿಗಿನ ವಿಶೇಷ ಸವಲತ್ತುಗಳ ಕಾರ್ಯತಂತ್ರದ ಪಾಲುದಾರಿಕೆಯ ಸಂಬಂಧಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ. ರಾಷ್ಟ್ರದ ಮುಖ್ಯಸ್ಥರಾಗಿ ನಿಮ್ಮ ಚಟುವಟಿಕೆಗಳು ನಮ್ಮ ಸ್ನೇಹಪರ ರಾಷ್ಟ್ರಗಳ ಪ್ರಯೋಜನಕ್ಕಾಗಿ ಮತ್ತು ಬಲವಾದ ಅಂತರರಾಷ್ಟ್ರೀಯ ಸ್ಥಿರತೆ, ಭದ್ರತೆಯ ಹಿತಾಸಕ್ತಿಗಳು ವಿವಿಧ ಕ್ಷೇತ್ರಗಳಲ್ಲಿ ರಷ್ಯಾ-ಭಾರತದ ರಾಜಕೀಯ ಮಾತುಕತೆ ಮತ್ತು ಉತ್ಪಾದಕ ಸಹಕಾರದ ಮತ್ತಷ್ಟು ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ವಿಮಾನದಲ್ಲಿದ್ದ ಪ್ರಯಾಣಿಕರ ಜೀವ ಉಳಿಸಿದ ತೆಲಂಗಾಣ ರಾಜ್ಯಪಾಲ
Advertisement
H.E. President Vladimir Putin congratulated Smt Droupadi Murmu on her election as the 15th President of India.
Президент России Владимир Путин поздравил Драупади Мурму с избранием на пост 15-го президента Индии.
Пресс-релиз/Press release – https://t.co/bkjlrhWY22 pic.twitter.com/ouS4iGl1Tw
— India in Russia (@IndEmbMoscow) July 23, 2022
Advertisement
ಒಡಿಶಾದ ಮಯೂರ್‍ಭಂಜ್ ಜಿಲ್ಲೆಯವರಾದ ಮುರ್ಮು ಅವರು, ಸಂಸದರು ಮತ್ತು ಶಾಸಕರ ಮತಗಳ ಎಣಿಕೆಯಲ್ಲಿ 64 ಪ್ರತಿಶತಕ್ಕೂ ಹೆಚ್ಚು ಮಾನ್ಯ ಮತಗಳನ್ನು ಪಡೆದ ನಂತರ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಹೆಚ್ಚಿನ ಅಂತರದಿಂದ ಗೆದ್ದಿದ್ದಾರೆ.
Advertisement
ಮುರ್ಮು ಅವರು ಭಾರತದ ಮೊದಲ ಬುಡಕಟ್ಟು ಅಧ್ಯಕ್ಷರಾಗುವ ಮೂಲಕ ಇತಿಹಾಸವನ್ನು ಬರೆದರು. ಮುರ್ಮು ದೇಶಕ್ಕೆ ಸ್ವಾತಂತ್ರ್ಯ ದೊರೆತ ನಂತರ ಜನಿಸಿದ ಭಾರತದ ಮೊದಲ ರಾಷ್ಟ್ರಪತಿಯಾಗಲಿದ್ದಾರೆ. ಉನ್ನತ ಹುದ್ದೆಗೆ ಆಯ್ಕೆಯಾದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.
ಮುರ್ಮು ಅವರು ಜುಲೈ 25 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ನಿಮ್ಮದೆಲ್ಲಾ ಬಯಲಿಗೆ ಎಳೆಯುತ್ತೇನೆ ಜಸ್ಟ್ ವೇಟ್: ಎಂ.ಸಿ.ಸುಧಾಕರ್‌ಗೆ ಸಚಿವ ಸುಧಾಕರ್ ವಾರ್ನಿಂಗ್