ಮಾಸ್ಕೋ: ಭಾರತದ ಚಂದ್ರಯಾನ-3 ಗಿಂತ (Chandrayaan-3) ಮೊದಲು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೇಲೆ ಇಳಿಯುವ ರಷ್ಯಾದ ಕನಸು ಭಗ್ನಗೊಂಡಿದೆ. ಚಂದ್ರನ ಮೇಲ್ಮೆನಲ್ಲಿ ಲ್ಯಾಂಡ್ ಆಗಬೇಕಿದ್ದ ಲೂನಾ-25 (Luna-25 Lander) ಚಂದ್ರನ ಮೇಲೆ ಪೂರ್ವ ಲ್ಯಾಂಡಿಂಗ್ ಕಕ್ಷೆ (Pre Moon Orbit) ಪ್ರವೇಶಿಸಲು ವಿಫಲವಾಗಿ ಪತನಗೊಂಡಿದೆ.
ರಷ್ಯಾದ ಬಾಹ್ಯಾಕಾಶ ಸಂಸ್ಥೆ ರೋಸ್ಕೋಸ್ಮೊಸ್ ಅಧಿಕೃತವಾಗಿ ಈ ವಿಚಾರವನ್ನು ತಿಳಿಸಿದೆ. ರೋಬೋಟಿಕ್ ಬಾಹ್ಯಾಕಾಶ ನೌಕೆಯು ಶನಿವಾರ ಚಂದ್ರನ ಅಂಗಳಕ್ಕೆ ಇಳಿಯಬೇಕಿತ್ತು. ಆದರೆ ಕೊನೆಯ ಹಂತದಲ್ಲಿ ಸಾಫ್ಟ್ ಲ್ಯಾಂಡಿಂಗ್ ಆಗಬೇಕಿದ್ದ ನೌಕೆ ಚಂದ್ರನ ಅಂಗಳಕ್ಕೆ ಅಪ್ಪಳಿಸಿ ಸಂಪರ್ಕವನ್ನು ಕಳೆದುಕೊಂಡಿದೆ ಎಂದು ರೋಸ್ಕೋಸ್ಮೊಸ್ ಹೇಳಿದೆ ಇದನ್ನೂ ಓದಿ: ಅಂತಿಮ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆಯೂ ಯಶಸ್ವಿ – ಚಂದ್ರನ ಅಂಗಳಕ್ಕೆ ಇನ್ನೊಂದೇ ಹೆಜ್ಜೆ
Advertisement
Advertisement
ಆಗಸ್ಟ್ 10 ರಂದು ರಷ್ಯಾ ಲೂನಾ-25 ಗಗನ ನೌಕೆಯನ್ನು ಉಡಾವಣೆ ಮಾಡುವ ಮೂಲಕ ನಾಸಾ ಹಾಗೂ ಇತರ ಬಾಹ್ಯಾಕಾಶ ಸಂಸ್ಥೆಗಳೊಂದಿಗೆ ಸ್ಪರ್ಧೆಗಿಳಿದಿತ್ತು. ಆಗಸ್ಟ್ 21 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಲು ನಿರ್ಧರಿಸಲಾಗಿತ್ತು. ಸುಮಾರು 50 ವರ್ಷಗಳ ಬಳಿಕ ಉಡಾವಣೆ ಮಾಡಿದ ಮೊದಲ ಚಂದ್ರಯಾನ ನೌಕೆ ಲೂನಾ- 25,ಚಂದ್ರನಲ್ಲಿ ನಿಗದಿಯಲ್ಲಿ ಇಳಿಯುವ ಮುನ್ನ ಸೇರಬೇಕಾದ ಕಕ್ಷೆಯನ್ನು ಪ್ರವೇಶಿಸುವಲ್ಲಿ ವಿಫಲವಾಗಿದೆ.
Advertisement
ಭಾರತ ಚಂದ್ರಯಾನ-3 ಕಾರ್ಯಾಚರಣೆಯ ಕೊನೆ ಹಂತದ ಭಾಗವಾಗಿ ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಮತ್ತು ರೋವರ್ ಬೇರ್ಪಡಿಸುವ ಕಾರ್ಯ ಗುರುವಾರ ಯಶಸ್ವಿಯಾಗಿ ನಡೆದಿತ್ತು. ಈ ಬೆನ್ನಲ್ಲೇ ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಇಸ್ರೋ ಯಶಸ್ವಿಗೊಳಿಸಿದೆ. ಆಗಸ್ಟ್ 23ರಂದು ಚಂದ್ರಯಾನ ನೌಕೆ ಚಂದ್ರನ ಮೇಲೆ ಇಳಿಯಲಿದೆ.
Advertisement
Web Stories