ಬೆಂಗಳೂರು: ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದಿದ್ದ ಉತ್ತರ ಕನ್ನಡ ಜಿಲ್ಲೆಯ ಉಸ್ತವಾರಿ ಸಚಿವ ಆರ್.ವಿ.ದೇಶಪಾಂಡೆ ಕ್ಷಮೆ ಕೇಳಿದ್ದಾರೆ.
ಸ್ಥಳಾವಕಾಶ ಕಡಿಮೆ ಇದ್ದಿದ್ದರಿಂದ ವೇದಿಕೆ ಮೇಲೇ ನಿಂತು ಕ್ರೀಡಾಪಟುಗಳತ್ತ ಕಿಟ್ ಎಸೆದಿದ್ದೇನೆ ಎಂದು ಸಚಿವರು ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.
Advertisement
ಆಗಿದ್ದೇನು?: ಜಿಲ್ಲೆಯ ಹಳಿಯಾಳದಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ನೂತನ ಒಳಾಂಗಣ ಕ್ರೀಡಾಂಗಣ ಕಟ್ಟಡ ಉದ್ಘಾಟನೆ ಆಯೋಜಿಸಲಾಗಿತ್ತು. ಜೊತೆಗೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ತೋರಿದ ಕ್ರೀಡಾ ಪಟುಗಳು ಹಾಗೂ ಸಂಘಗಳಿಗೆ ಸಾಮಗ್ರಿ ವಿತರಣೆ ಕಾರ್ಯಕ್ರಮ ನಡೆದಿತ್ತು.
Advertisement
Advertisement
ಕಾರ್ಯಕ್ರಮದ ಬಳಿಕ ಸಚಿವರು ಕ್ರೀಡಾಪಟುಗಳಿಗೆ ವಿವಿಧ ಸಾಮಗ್ರಿಗಳನ್ನು ವಿತರಿಸಲು ಮುಂದಾಗಿದ್ದರು. ಆಗ ಸಾಮಗ್ರಿಗಳನ್ನು ಪಡೆಯಲು ಕ್ರೀಡಾಪಟು ಸ್ವಲ್ಪ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಸಚಿವರು ವೇದಿಕೆಯಿಂದಲೇ ಕಿಟ್ ಎಸೆದಿದ್ದರು. ಅಷ್ಟೇ ಅಲ್ಲದೇ ಲಗೂ ಬರ್ರೀ ಪಾ.. ತಗೊಂಡು ಹೋಗಾಕ ಹರಸಾಹಸ ಪಡತಿರಲ್ಲ ಎಂದು ಲೇವಡಿ ಮಾಡಿದ್ದರು. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವ ಪಟುಗಳ ಮೇಲೆ ದರ್ಪ ಮೆರೆದು ಸಚಿವರು ಅಗೌರವ ತೋರಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv