Connect with us

Districts

ಲಸಿಕೆ ತೆಗೆದುಕೊಂಡ ದೇಶಪಾಂಡೆಗೆ ಕೊರೊನಾ ಪಾಸಿಟಿವ್

Published

on

ಕಾರವಾರ: ಮಾಜಿ ಸಚಿವ ಹಾಲಿ ಶಾಸಕ ಆರ್.ವಿ. ದೇಶಪಾಂಡೆ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳುವಂತೆ ಸೋಶಿಯಲ್ ಮೀಡಿಯಾದಲ್ಲಿ ಮನವಿ ಮಾಡಿದ್ದಾರೆ.

ಹಳಿಯಾಳ ಕ್ಷೇತ್ರದ ಶಾಸಕರಾಗಿರುವ ಆರ್.ವಿ. ದೇಶಪಾಂಡೆ ಈ ಬಗ್ಗೆ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಪ್ರಕಟಿಸಿದ್ದು, ನನಗೆ ಕೊರೊನೊ ಸೋಂಕು ದೃಢವಾಗಿದೆ. ಕಳೆದ 15 ದಿನದಿಂದ ತನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿ ಕೊಳ್ಳಿ ಎಂದು ದೇಶಪಾಂಡೆ ಮನವಿ ಮಾಡಿದ್ದಾರೆ.

ಏಪ್ರಿಲ್ 20 ರಂದು ಮಂಗಳೂರಿನಲ್ಲಿ ಎರಡನೇ ಬಾರಿ ಕೊರೊನ ಲಸಿಕೆ ಪಡೆದುಕೊಂಡಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದರು. ಇಷ್ಟಾದರೂ ಕೂಡ ಇದೀಗ ಅವರಲ್ಲಿ ಕೊವಿಡ್ ಕಾಣಿಸಿಕೊಂಡಿದ್ದು ಬೇಗ ಗುಣಮುಖರಾಗಿ ಎಂದು ಅಭಿಮಾನಿಗಳು ಹಿತೈಷಿಗಳು ಅವರ ಪೋಸ್ಟ್‌ಗೆ ಪ್ರತಿಕ್ರಿಸಿದ್ದಾರೆ.

 

 

Click to comment

Leave a Reply

Your email address will not be published. Required fields are marked *