ಕೋಲಾರ: ಮಳೆ ಸಂತ್ರಸ್ತರಿಗೆ ಬಿಸ್ಕೆಟ್ ಕೊಡುವ ರೀತಿ ತಪ್ಪು, ಆದರೆ ಉದ್ದೇಶ ಪೂರ್ವಕವಾಗಿ ನಿರಾಶ್ರಿತರಿಗೆ ಅವಮಾನ ಮಾಡಬೇಕೆಂದು ಹಾಗೆ ಸಚಿವ ರೇವಣ್ಣ ಮಾಡಿಲ್ಲ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸಂತ್ರಸ್ತರಿಗೆ ಬಿಸ್ಕೇಟ್ ಎಸೆದ ವಿಚಾರವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಗತಿ ಪರಿಶೀಲನೆ ಸಭೆಗೂ ಮುನ್ನ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಸ್ಕೆಟ್ ಎಸೆದಿರುವುದು ತಪ್ಪು, ಅದನ್ನ ನಾನು ಒಪ್ಪಿಕೊಳ್ಳುತ್ತೇನೆ. ವಿತರಣೆ ಮಾಡುವಾಗ ಸರಿಯಾಗಿ ವಿತರಣೆ ಮಾಡಬೇಕಿತ್ತು. ಆದರೆ ಸಂತ್ರಸ್ತರಿಗೆ ಅವಮಾನಮಾಡಬೇಕೆಂದು ಹಾಗೆ ಮಾಡಿಲ್ಲ ಎಂದು ರೇವಣ್ಣನವರ ಪರ ಬ್ಯಾಟ್ ಬೀಸಿದ್ದಾರೆ.
Advertisement
Advertisement
ಈಗಾಗಲೇ ಸಿಎಂ ಕುಮಾರಸ್ವಾಮಿಗಳು ಈ ವಿಚಾರಕ್ಕೆ ಸ್ಪಷ್ಟನೆ ನೀಡಿ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ವಿಚಾರದಲ್ಲಿ ಸಾರ್ವಜನಿಕರು ಸಹಕರಿಸಬೇಕು. ಈ ವೇಳೇ ಕಂದಾಯ ಅದಾಲತ್ 6 ತಿಂಗಳುಗಳ ಕಾಲ ವಿಸ್ತರಣೆ ಮಾಡಿದ್ದು, ರಾಜ್ಯದ 30 ಸಾವಿರ ಹಳ್ಳಿಗಳಲ್ಲಿ 10 ಸಾವಿರ ಹಳ್ಳಿಗಳು ಪೋಡಿ ಮುಕ್ತವಾಗಿವೆ ಎಂದು ತಿಳಿಸಿದರು. ಇದನ್ನೂ ಓದಿ: ಅಧಿಕಾರದ ಮದದಲ್ಲಿ ಅಮಾನವೀಯ ಕೆಲಸ- ಕೊಡಗು ಸಂತ್ರಸ್ತರಿಗೆ ಬಿಸ್ಕೆಟ್ ಎಸೆದ ಸೂಪರ್ ಸಿಎಂ
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv