ಕಾರವಾರ: ಕಸ್ತೂರಿ ರಂಗನ್ ವರದಿ ಸ್ಥಳಕ್ಕೆ ಭೇಟಿ ನೀಡಿ ಮಾಡಿದ ವರದಿಯಲ್ಲ, ಬದಲಿಗೆ ಈ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಕಿಡಿಕಾರಿದರು.
ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಕ್ಕೆ ತರಬಾರದೆಂದು ಆಗ್ರಹಿಸಿದ ಪ್ರತಿಭಟನಾಗಾರರು ಜೊಯಿಡಾ ನಗರದ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಕಾಲ್ನಡಿಗೆಯಲ್ಲಿ ಸಾಗಿ ಜೋಯಿಡಾ ತಹಶೀಲ್ದಾರ್‌ಗೆ ವರದಿ ವಿರೋಧಿಸಿ ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ದೇಶಪಾಂಡೆ ಅವರು, ಕಸ್ತೂರಿ ರಂಗನ್ ವರದಿ ಸ್ಥಳಕ್ಕೆ ಭೇಟಿ ನೀಡಿ ಮಾಡಿದ ವರದಿಯಲ್ಲ. ಸಂಪೂರ್ಣ ಅವೈಜ್ಞಾನಿಕವಾಗಿದೆ. ನಮ್ಮ ರಾಜ್ಯವೂ ಸೇರಿದಂತೆ ದೇಶದ 6 ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟದ 56,825 ಚದರ ಕಿ.ಮೀ ವಿಸ್ತೀರ್ಣದ ಪ್ರದೇಶವನ್ನು ಸುಪ್ರೀಂ ಕೋರ್ಟ್‍ನ ಆದೇಶದನ್ವಯ ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಿ ಕೇಂದ್ರ ಸರ್ಕಾರ ಜುಲೈ 1 ರಂದು ಕರಡು ಅಧಿಸೂಚನೆ ಹೊರಡಿಸಿದೆ.
ಈ ಹಿಂದೆ 3 ಬಾರಿ ಅಧಿಸೂಚನೆಯನ್ನು ಹೊರಡಿಸಿದ್ದ ಕೇಂದ್ರದ ಈ ಪ್ರಯತ್ನಕ್ಕೆ ರಾಜ್ಯ ಸರ್ಕಾರವು ವಿರೋಧವನ್ನು ವ್ಯಕ್ತಪಡಿಸುತ್ತಲೇ ಇದೆ. ಈಗ ಇನ್ನೊಮ್ಮೆ ಅಧಿಸೂಚನೆ ಹೊರಡಿಸಿರುವುದು ರಾಜ್ಯದ ಜನತೆಗೆ ಆತಂಕವನ್ನು ತಂದೊಡ್ಡಿದೆ ಎಂದರು.
ಇನ್ನೂ ಪಶ್ಚಿಮ ಘಟ್ಟದ ಜೀವ ವೈವಿಧ್ಯ ರಕ್ಷಣೆ ಮತ್ತು ಸಂರಕ್ಷಣೆ ಉದ್ದೇಶದಿಂದ ಕೇಂದ್ರ ಪರಿಸರ, ಅರಣ್ಯ ಸಚಿವಾಲಯವು ಕಸ್ತೂರಿ ರಂಗನ್ ವರದಿಯಂತೆ ಪರಿಸರ ಸೂಕ್ಷ್ಮ ವಲಯವೆಂದು ಗುರುತಿಸಲಾದ ಪ್ರದೇಶದಲ್ಲಿ ನಮ್ಮ ರಾಜ್ಯದ 10ಜಿಲ್ಲೆಗಳ 1,572 ಗ್ರಾಮಗಳನ್ನು ಮತ್ತು ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳಿಂದ 704 ಗ್ರಾಮಗಳು ಸೇರ್ಪಡೆಗೊಂಡಿದೆ.
ಅತಿ ಹೆಚ್ಚು ಭೂ ಪ್ರದೇಶದ ಸುಮಾರು 2,06,681 ಚದರ ಕಿ.ಮೀ ವಿಸ್ತೀರ್ಣ ಪ್ರದೇಶವು ನಮ್ಮ ರಾಜ್ಯದ ಭಾಗವೇ ಆಗಿರುವುದು ತೀವ್ರ ಆತಂಕಕ್ಕೆ ಎಡೆಮಾಡಿ ಕೊಟ್ಟಿದೆ. ಇದನ್ನೂ ಓದಿ: ಹುಬ್ಬಳ್ಳಿ ತಾರಿಹಾಳ ಅಗ್ನಿ ಅವಘಡ- ಸಂತ್ರಸ್ತರಿಗೆ ಪರಿಹಾರ ಕೊಡಿಸುವ ಜೋಶಿ ಕಾಳಜಿಗೆ ಸಿಎಂ ಸ್ಪಂದನೆ
ಪಶ್ಚಿಮ ಘಟ್ಟಗಳಿಂದಲೇ ಆವರಿಸಿರುವ ನಮ್ಮ ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ, ವಿಶೇಷವಾಗಿ ಜೋಯಿಡಾ ತಾಲೂಕಿನಲ್ಲಿ ಈಗಾಗಲೇ ಹಲವಾರು ಬೃಹತ್ ಯೋಜನೆಗಳು, ಅಭಯಾರಣ್ಯಗಳು ಇದ್ದು, ಈ ಯೋಜನೆಗಳಿಂದ ಇಲ್ಲಿಯೇ ಬದುಕನ್ನು ಕಟ್ಟಿಕೊಂಡ ಜನಸಾಮಾನ್ಯರು, ನಿರಾಶ್ರಿತರಾಗಿ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ 96 ಗ್ರಾಮಗಳು ಪರಿಸರ ಸೂಕ್ಷ್ಮ ವಲಯದಲ್ಲಿ ಗುರುತಿಸಿಕೊಂಡಿದ್ದು, ತಾಲೂಕಿನ ಕೇಂದ್ರ ಸ್ಥಾನವೂ ಸೇರಿದಂತೆ ಶೇ. 90ರಷ್ಟು ಹೆಚ್ಚಿನ ಪ್ರದೇಶವು ಈ ವಲಯದ ವ್ಯಾಪ್ತಿಯಲ್ಲಿ ಬರುತ್ತದೆ. ಇದರಿಂದ ತಾಲೂಕಿನಲ್ಲಿ ಕೈಗೊಳ್ಳುವ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವ ಆತಂಕ ಎದುರಾಗಿದೆ. ಇದನ್ನೂ ಓದಿ: ರಾಜಕಾರಣದಲ್ಲಿ ಯಶಸ್ವಿಯಾಗಬೇಕಾದರೆ, ಕಬಡ್ಡಿನೂ ಗೊತ್ತಿರಬೇಕು, ಚದುರಂಗದಾಟನೂ ಗೊತ್ತಿರಬೇಕು: ಬಿ.ವೈ.ವಿಜಯೇಂದ್ರ
ಪಶ್ಚಿಮ ಘಟ್ಟಗಳ ಪ್ರದೇಶದ ಆರಣ್ಯಜೀವಸಂಕುಲಗಳ ಸಂರಕ್ಷಣೆ ಮತ್ತು ಪರಿಸರದ ಸಮತೋಲನದ ಜೊತೆಗೆ ಅಭಿವೃದ್ಧಿಯೂ ಆಗಬೇಕು ಎಂಬುದು ನನ್ನ ನಿಲುವು. ಆದರೆ, ಹಲವಾರು ವರ್ಷಗಳಿಂದ ಅರಣ್ಯ ಪ್ರದೇಶದಲ್ಲಿರುವ ವಾಸಿಸುತ್ತಿರುವ ಜನರು ಬೃಹತ ಯೋಜನೆಗಳಿಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದು, ಅವರ ಹಿತವನ್ನು ಕಾಪಾಡುವುದು ನಮ್ಮ ಆದ್ಯತೆಯಾಗಬೇಕಾಗಿದೆ. ರಾಜ್ಯ ಸರ್ಕಾರ ಈ ಯೋಜನೆ ಜಾರಿಯನ್ನು ವಿರೋಧಿಸಿ ಶೀಘ್ರವಾಗಿ ಆಕ್ಷೇಪಣಾ ಅರ್ಜಿಯನ್ನು ಸಲ್ಲಿಸಿ ಪಶ್ಚಿಮ ಘಟ್ಟದಲ್ಲಿ ವಾಸಿಸುವ ಜನರ ಹಿತಕಾಪಾಡಬೇಕಿದೆ ಎಂದರು.