– ಈಗ ಪ್ರತಿದಿನ ಫೋನ್ ಕದ್ದಾಲಿಕೆ ನಡೆಯುತ್ತಿದೆ: ಮಾಜಿ ಸಚಿವ ಬಾಂಬ್
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗ್ತೀನಿ ಅಂತ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ (RV Deshpande) ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
Advertisement
ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ. ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದ್ರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ 2ನೇ ದಿನವೂ ಉತ್ತಮ ಸ್ಪಂದನೆ – ಸಂಜೆ 6 ಗಂಟೆವರೆಗೂ ಇರಲಿದೆ ಮೇಳ
Advertisement
Advertisement
ನಾನು ಸಿದ್ದರಾಮಯ್ಯಗಿಂತ 2 ವರ್ಷ ದೊಡ್ಡವನು:
ಈ ವೇಳೆ ಸಿಎಂ (Chief Minister) ಆಗುವ ಆಸೆ ಇದ್ಯಾ ಎಂಬ ಪತ್ರಕರ್ತರ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ದೇಶಪಾಂಡೆ, ನನಗೆ ಆಸೆ ಇದೆ. ನಿಮ್ಮಂಥ ಜನರಿಗೂ ಆಸೆ ಇರುತ್ತೆ. ಲೈಫ್‌ನಲ್ಲಿ ಗುರಿ ಮುಖ್ಯ. ನಾನು ಸಿದ್ದರಾಮಯ್ಯಗಿಂತ 2 ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರೂ ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ. 5 ವರ್ಷ ಸಿಎಂ ಆಗಿ ಅವರೇ ಇರ್ತಾರೆ. ಸದ್ಯಕ್ಕೆ ಬದಲಾವಣೆ ಚರ್ಚೆ ನಡೆದಿಲ್ಲ ಎಂದು ನುಡಿದಿದ್ದಾರೆ.
Advertisement
ಸದ್ಯ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿಲ್ಲ. ನನಗೆ ಗೊತ್ತಿಲ್ಲದೆ ಯಾವ ಚರ್ಚೆಯೂ ನಡೆಯಲು ಸಾಧ್ಯವಿಲ್ಲ. ಪರಮೇಶ್ವರ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವುದು ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೇ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೌರಿ ಹಬ್ಬದಂದು ಮುಖ್ಯಮಂತ್ರಿಗಳಿಂದ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿ ಉದ್ಘಾಟನೆ – ಡಿಕೆಶಿ
ಪ್ರತಿದಿನ ಫೋನ್ ಕದ್ದಾಲಿಕೆ:
ಇದೇ ವೇಳೆ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಫೋನ್ ಟ್ಯಾಪಿಂಗ್ ಆರೋಪ ಬಂದ ತಕ್ಷಣ ರಾಮಕೃಷ್ಣ ಹೆಗೆಡೆ ಅವರು ರಾಜೀನಾಮೆ ನೀಡಿದ್ದರು. ಆದ್ರೆ ಈಗ ಪ್ರತಿದಿನವೂ ಫೋನ್ ಕದ್ದಾಲಿಕೆ ನಡೆಯುತ್ತಿದೆ. ಈ ಹಿಂದೆ ಮೌಲ್ಯಾಧರಿತ ರಾಜಕಾರಣ ಮಾಡುತ್ತಿದ್ದರು. ಅದೇ ರೀತಿ ನಡೆದು ಕೊಳ್ಳುತ್ತಿದ್ದರು. ಈಗ ಮೌಲ್ಯಾಧಾರಿತ ರಾಜಕಾರಣವೇ ನಡೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನೂ ಮುಡಾ ಹಗರಣ ವಿಚಾರಕ್ಕೆ ಪ್ರತಿಕ್ರಿಯಿಸಿ, ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ? ಸಾವಿರಾರು ಕೋಟಿ ಹಗರಣ ಅಂತ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಇಂಡಿಗೋ ವಿಮಾನದ ವಾಶ್‍ರೂಮ್‍ನಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ – ತುರ್ತು ಭೂಸ್ಪರ್ಶ