ನವದೆಹಲಿ/ಟೆಹರಾನ್: ಹೈಜಾಕ್ ಆಗಿರುವ ಹಡಗಿನಲ್ಲಿರುವ ಭಾರತೀಯ ಸಿಬ್ಬಂದಿಯನ್ನು ಭೇಟಿಯಾಗಲು ಅಧಿಕಾರಿಗಳಿಗೆ ಇರಾನ್ (Iran) ಅವಕಾಶ ನೀಡಿದೆ.
ಭಾನುವಾರ ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಇರಾನ್ ವಿದೇಶಾಂಗ ಸಚಿವ ಅಮೀರ್-ಅಬ್ದುಲ್ಲಾಹಿಯಾನ್ ಜೊತೆ ಮಾತುಕತೆ ನಡೆಸಿದ್ದರು. ಈ ಮಾತುಕತೆಯ ನಂತರ ಇರಾನ್ ಭಾರತೀಯ ಅಧಿಕಾರಿಗಳಿಗೆ ತನ್ನ ಪ್ರಜೆಗಳನ್ನು ಭೇಟಿಯಾಗಲು ಅನುಮತಿ ನೀಡಿದೆ.
Advertisement
Spoke to Iranian FM @Amirabdolahian this evening.
Took up the release of 17 Indian crew members of MSC Aries.
Discussed the current situation in the region. Stressed the importance of avoiding escalation, exercising restraint and returning to diplomacy.
Agreed to remain…
— Dr. S. Jaishankar (Modi Ka Parivar) (@DrSJaishankar) April 14, 2024
Advertisement
ಇರಾನ್ ವಶಪಡಿಸಿಕೊಂಡ ಹಡಗಿನಲ್ಲಿ 17 ಮಂದಿ ಭಾರತೀಯ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಬಿಡುಗಡೆ ಸಂಬಂಧ ಭಾರತ ಸರ್ಕಾರ ಇರಾನ್ ಜೊತೆ ಮಾತುಕತೆ ನಡೆಸುತ್ತಿದೆ. ಇದನ್ನೂ ಓದಿ: ಭಾರತದಲ್ಲಿ ದಾಖಲೆ – ಚುನಾವಣೆ ನಡೆಯುವ ಮೊದಲೇ ನಗದು, ಮದ್ಯ ಸೇರಿ ಒಟ್ಟು 4,658 ಕೋಟಿ ಮೌಲ್ಯದ ವಸ್ತುಗಳು ವಶ
Advertisement
ಯುಎಇಯಿಂದ (UAE) ಸರಕು ತುಂಬಿಸಿಕೊಂಡು ಮುಂಬೈ (Mumbai) ಬಂದರಿಗೆ ಬರುತ್ತಿದ್ದ MCS Aries ಹೆಸರಿನ ಕಂಟೈನರ್ ಶಿಪ್ ಅನ್ನು Strait of Hormuz ಬಳಿ ಇರಾನ್ ಏ.14 ರಂದು ವಶಪಡಿಸಿಕೊಂಡಿತ್ತು.
Advertisement
ಪೋರ್ಚುಗೀಸ್ ಧ್ವಜ ಹೊಂದಿದ್ದ ಈ ಹಡಗಿನ ಮೇಲೆ ಇರಾನ್ ಸೈನಿಕರು ಹೆಲಿಕಾಪ್ಟರ್‌ನಿಂದ ನೇರವಾಗಿ ಇಳಿದು ದಾಳಿ ಮಾಡಿ ವಶ ಪಡಿಸಿದ್ದಾರೆ. ಈ ಹಡಗು ಇಸ್ರೇಲಿ (Israel) ಬಿಲಿಯನೇರ್ ಇಯಾಲ್ ಆಫರ್ ಒಡೆತನದ ಲಂಡನ್ ಮೂಲದ ಜೊಡಿಯಾಕ್ ಮಾರಿಟೈಮ್‌ನೊಂದಿಗೆ ಕಂಪನಿಯೊಂದಿಗೆ ಸಂಯೋಜಿತವಾಗಿದೆ. ಈ ಹಡಗು ಏ.15ರ ರಾತ್ರಿ ಮುಂಬೈ ಬಂದರಿಗೆ ಆಗಮಿಸಬೇಕಿತ್ತು.