ಕಿರುತೆರೆಗೆ ಎಸ್.ನಾರಾಯಣ್ ಪುತ್ರ ಪಂಕಜ್ : ಧಾರಾವಾಹಿಗೆ ನಾಯಕ

Public TV
2 Min Read
Siri Kannada 1

ತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ‘ಸಿರಿಕನ್ನಡ’ ವಾಹಿನಿಯಲ್ಲಿ ಇದೇ ಜೂನ್ 5 ರಿಂದ ‘ಊರ್ಮಿಳಾ’,‌ ‘ಬ್ರಾಹ್ಮಿನ್ಸ್ ಕೆಫೆ’ ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ ‘ಸಖತ್ ಜೋಡಿ’ ಎಂಬ ರಿಯಾಲಿಟಿ ಶೋ ಆರಂಭವಾಗಲಿದೆ. ಈ ಕುರಿತು ಮಾಹಿತಿ ನೀಡಲು ವಾಹಿನಿ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

Siri Kannada 4

ನಮ್ಮ ಸಿರಿಕನ್ನಡ ವಾಹಿನಿಗೆ ಪ್ರೋತ್ಸಾಹ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ. ಈಗಾಗಲೇ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ಮೂಲಕ ಸಿರಿಕನ್ನಡ ಕನ್ನಡಿಗರ ಮನ ಗೆದ್ದಿದೆ. ಜೂನ್ 5 ರಿಂದ ಊರ್ಮಿಳಾ ಹಾಗೂ ಬ್ರಾಹ್ಮಿನ್ಸ್ ಕೆಫೆ ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ ಸಖತ್ ಜೋಡಿ ಎಂಬ ರಿಯಾಲಿಟಿ ಶೋ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ನಮ್ಮ ವಾಹಿನಿಯಿಂದ ಅಪಾರ ವೆಚ್ಚದಲ್ಲಿ ಈ ರಿಯಾಲಿಟಿ ಶೋ ನಿರ್ಮಾಣವಾಗುತ್ತಿದೆ. ಈ ಶೋನಲ್ಲಿ ಭಾರಿ ಮೊತ್ತದ ಉಡುಗೊರೆಗಳು ಇದೆ. ಮುಂದೆ ನಮ್ಮ ವಾಹಿನಿಯ ವೀಕ್ಷಕರಿಗೆ ಅರ್ಧಗಂಟೆಗೊಮ್ಮೆ ಪ್ರಶ್ನೆ ಕೇಳುವುದು. ಗೆದ್ದವರಿಗೆ ವಿಶೇಷ ಬಹುಮಾನ ನೀಡುವ ಯೋಜನೆ ಕೂಡ ಹಾಕಿಕೊಂಡಿದ್ದೇವೆ ಎಂದರು ವಾಹಿನಿಯ ಮುಖ್ಯಸ್ಥರಾದ ರಾಜೇಶ್ ರಾಜಘಟ್ಟ.‌ ಇದೇ ಸಂದರ್ಭದಲ್ಲಿ ಸಂಸ್ಥಾಪಕ ನಿರ್ದೇಶಕರಾದ ಶಿವಕುಮಾರ್ ಅವರು ಉಪಸ್ಥಿತರಿದ್ದರು.

Siri Kannada 5

ನನ್ನನ್ನು ಹಾಸ್ಯ ನಟನಾಗಿ ಗುರುತಿಸಿದ್ದೀರಿ. ಸಖತ್ ಜೋಡಿ ಎಂಬ ಸಖತ್ ಕಾರ್ಯಕ್ರಮವನ್ನು ನಾನು ಹಾಗೂ ಹೇಮಲತಾ ನಿರೂಪಣೆ ಮಾಡುತ್ತಿದ್ದೇವೆ. ಈಗಾಗಲೇ ಮೂರು ಎಪಿಸೋಡ್ ಚಿತ್ರೀಕರಣವಾಗಿದೆ. ಊರ್ಮಿಳಾ ಧಾರಾವಾಹಿ ತಂಡದವರು, ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಟಾಪರ್ಸ್ ಹಾಗೂ ಜಾನಪದ ಕಲಾವಿದರು ಪಾಲ್ಗೊಂಡಿದ್ದರು. ಜೂನ್ 5 ರಿಂದ ಸೋಮವಾರದಿಂದ ಶುಕ್ರವಾರದವರೆಗೂ ಸಂಜೆ 6ಗಂಟೆಗೆ ಸಖತ್ ಜೋಡಿ ಪ್ರಸಾರವಾಗಲಿದೆ. ಇದಕ್ಕಾಗಿ ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿ ಸೆಟ್ ಹಾಕಲಾಗಿದೆ ಎಂದು ಹಿತೇಶ್ ತಿಳಿಸಿದರು. ಇದನ್ನೂ ಓದಿ:ಪಿಎಚ್‌ಡಿ ಪ್ರವೇಶ ಪರೀಕ್ಷೆ ಬರೆದ ನಟಿ ಪವಿತ್ರಾ ಲೋಕೇಶ್

Siri Kannada 2

ಖ್ಯಾತ ನಿರ್ದೇಶಕ ಎಸ್ ನಾರಾಯಣ್ (S. Narayan) ಪುತ್ರ ಪಂಕಜ್ (Pankaja) ಹಾಗೂ ರಶ್ಮಿತಾ ಪ್ರಧಾನಪಾತ್ರದಲ್ಲಿ ನಟಿಸುತ್ತಿರುವ ಊರ್ಮಿಳಾ (Urmila) ಧಾರಾವಾಹಿ ಇದೇ ಜೂನ್ 5 ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗಲಿದೆ. ನಾನು ಚಿಕ್ಕ ವಯಸ್ಸಿನಲ್ಲಿ ಬಾಲ ಕಲಾವಿದನಾಗಿ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದೆ. ಈಗ ಈ ಧಾರಾವಾಹಿ ಮೂಲಕ ಕಿರುತೆರೆಗೆ ಮತ್ತೆ ಬಂದಿದ್ದೇನೆ ಎಂದರು ಪಂಕಜ್. ರಶ್ಮಿತಾ, ಆಶಾರಾಣಿ, ಶಿವು ಮುಂತಾದವರು ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು.

 

ರವಿ.ಆರ್.ಗರಣಿ ಕಥೆ ಬರೆದಿರುವ ಬ್ರಾಹ್ಮಿನ್ಸ್ ಕೆಫೆ (Brahmins Cafe) ವಿಭಿನ್ನ ಕಥಾಹಂದರ ಹೊಂದಿದೆ. ಜೂನ್ 5ರಿಂದ ಸೋಮವಾರದಿಂದ ಶುಕ್ರವಾರದವರೆಗೂ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಶಿವು ಎಂಬ ಹೊಸಹುಡುಗ ಈ ಧಾರಾವಾಹಿಯ ಮೂಲಕ ಕಿರುತೆರೆ ಪ್ರವೇಶಿಸುತ್ತಿದ್ದಾನೆ. ಗಾಯತ್ರಿ ಸೆಲ್ವಂ ಹಾಗೂ ಸೆಲ್ವಂ ಈ ಧಾರಾವಾಹಿ ನಿರ್ಮಾಣ ಮಾಡುತ್ತಿದ್ದಾರೆ ಎಂದು ನಿರ್ದೇಶಕ ಸಂಜೀವ್ ತಗಡೂರು ತಿಳಿಸಿದರು. ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವ ಶ್ರೀನಾಥ್ ವಸಿಷ್ಠ, ಪ್ರಥಮ ಪ್ರಸಾದ್, ಶಿವು, ರಾಮಸ್ವಾಮಿ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

Share This Article